ಮಂಗಳೂರು: ಇತ್ತೀಚಿಗೆ ಮಂಗಳೂರನಲ್ಲಿ ಜೆರೋಸಾ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ ಸೇರಿದಂತೆ ಐವರ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಅಲ್ಲದೆ ದೂರುದಾರರಿಗೆ ನೋಟಿಸ್ ಜಾರಿಗೊಳಿಸಿ ಆದೇಶ ನೀಡಿದೆ ಎಂದು ತಿಳಿದುಬಂದಿದೆ.
ಉದ್ಯಮಿ, ಮಾಜಿ ಕಾಂಗ್ರೆಸ್ ನಾಯಕ ‘ನವೀನ್ ಜಿಂದಾಲ್’ ಬಿಜೆಪಿಗೆ ಸೇರ್ಪಡೆ | Naveen Jindal Joins BJP
ಫೆ.12ರಂದು ಜೆರೋಸಾ ಶಾಲೆಯಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ವಿಹಿಂಪ ಮುಖಂಡ ಶರಣ್ ಪಂಪೈಲ್, ಪಾಲಿಕೆ ಸದಸ್ಯರಾದ ಸಂದೀಪ್ ಗರೋಡಿ, ಭರತ್ ಕುಮಾರ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿತ್ತು.ಶಾಲೆಯ ಬಳಿಯ ನಿವಾಸಿ ಅನಿಲ್ ಜೆರಾಲ್ಡ್ ಲೋಬೊ ಎಂಬವರು ಪಾಂಡೇಶ್ವರ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಘಟನೆಗೆ ಸಂಬಂಧಿಸಿ ಆರೋಪಿಗಳು ಹೈಕೋರ್ಟ್ನಲ್ಲಿ ಜಾಮೀನು ಪಡೆದಿದ್ದರು.
ವಾದವನ್ನು ಆಲಿಸಿದ ಜಸ್ಟೀಸ್ ಕೃಷ್ಣ ಎಸ್.ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕರಣದ ತನಿಖೆಗೆ ತಡೆ ನೀಡಿದ್ದು, ದೂರುದಾರರಿಗೆ ನೋಟಿಸ್ ಜಾರಿಗೊಳಿಸಿ ಆದೇಶಿಸಿತು. ಜೆರೋಸಾ ಶಾಲೆಯ ವಿರುದ್ಧದ ಆರೋಪಗಳ ಬಗ್ಗೆ ಶಿಕ್ಷಣ ಇಲಾಖೆಯ ಕಲಬುರಗಿ ವಲಯ ಹೆಚ್ಚುವರಿ ಆಯುಕ್ತ ಡಾ.ಆಕಾಶ್ ವಿಚಾರಣೆ ನಡೆಸಿ ವರದಿ ತಯಾರಿಸಿದ್ದಾರೆ.
ಇದಪ್ಪ ‘ಸಂಚಾರಿ ಪೊಲೀಸ್’ ಕೆಲಸ ಅಂದ್ರೆ.! ಈ ಸುದ್ದಿ ಓದಿ, ನೀವು ‘ಹ್ಯಾಟ್ಸ್ ಆಫ್’ ಹೇಳೋದು ಗ್ಯಾರಂಟಿ
ಏನಿದು ಪ್ರಕರಣ?
ಮಂಗಳೂರಿನ ಜೆರೋಸಾ ಶಾಲೆಯಲ್ಲಿ ಅಯೋಧ್ಯೆ ಹಾಗೂ ಶ್ರೀರಾಮನಿಗೆ ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದಾರೆ. ಈ ಸಂಬಂಧ ಪೋಷಕರೊಬ್ಬರು ಮಾತನಾಡಿದ ಆಡಿಯೋ ವೈರಲ್ ಆಗಿದ್ದು, ಶಾಲೆಗೆ ಮುತ್ತಿಗೆ ಹಾಕಿ ಪ್ರತಿಭಟಿಸುವ ಸಂದೇಶ ಆ ಆಡಿಯೋದಲ್ಲಿತ್ತು. ಅದರಂತೆ ಶಾಲೆ ಆವರಣದಲ್ಲಿ ಜಮಾಯಿಸಿದ್ದ ವಿದ್ಯಾರ್ಥಿಗಳು, ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಶಾಲೆ ವಿರುದ್ಧ ಆಕ್ರೋಶ ಹೊರಹಾಕಿದರು.
ಬಳಿಕ ಬಿಜೆಪಿ ನಾಯಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿ ಆಕ್ರೋಶ ಹೊರಹಾಕಿದ್ದಲ್ಲದೆ, ವಿದ್ಯಾರ್ಥಿಗಳಿಂದ ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿಸಿದರು. ಪ್ರತಿಭಟನೆ ಕಾವು ಹೆಚ್ಚುತ್ತಿದ್ದಂತೆ ಎಚ್ಚೆತ್ತ ಶಾಲಾ ಆಡಳಿತ ಮಂಡಳಿ ಶಿಕ್ಷಕಿಯನ್ನು ಅಮಾತು ಮಾಡಿ ಆದೇಶಿಸಿತ್ತು. ಘಟನೆ ಕುರಿತು ಕ್ಷಮೆ ಕೇಳದ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಒಂದೆಡೆಯಾದರೆ, ಮತ್ತೊಂದೆಡೆ ಶಿಕ್ಷಕಿ ಅಮಾನತುಗೊಂಡ ಹಿನ್ನೆಲೆ ವಿದ್ಯಾರ್ಥಿಗಳು ಜೈ ಶ್ರೀರಾಮ್ ಘೋಷಣೆಗಳನ್ನು ಹಾಕಿ ಸಂಭ್ರಮಿಸಿದರು.
BREAKING : ಹುಬ್ಬಳ್ಳಿಯಲ್ಲಿ ಬೈಕ್ ಗೆ ‘KSRTC’ ಬಸ್ ಡಿಕ್ಕಿ : ಸ್ಥಳದಲ್ಲೇ ಸವಾರ ದುರ್ಮರಣ
ಈ ಪ್ರಕರಣದಲ್ಲಿ A1 ಬಿಜೆಪಿ ಶಾಸಕ ವೇದವ್ಯಾಸ ಕಾಮತ್, A2 ಬಿಜೆಪಿ ಶಾಸಕ ಭರತ್ ಶೆಟ್ಟಿ, A3 ಶರಣ್ ಪಂಪ್ವೆಲ್, A4 ಸಂದೀಪ್ ಗರೋಡಿ, A5 ಭರತ್ ಕುಮಾರ್ ಎಂದು ಹೆಸರು ಉಲ್ಲೇಖಿಸಲಾಗಿದೆ. ಆರೋಪಿಗಳು ಶಾಲೆಯ ಮುಂದೆ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದರೆಂದು FIRನಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಶಾಲೆ ಮುಂದೆ ಅಕ್ರಮವಾಗಿ ಗುಂಪುಗೂಡಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.
ಶಾಲೆ ಆಡಳಿತ ಮಂಡಳಿ ನಿಯಮ ಉಲ್ಲಂಘಿಸುವಂತೆ ವಿದ್ಯಾರ್ಥಿಗಳನ್ನು ಪ್ರಚೋದನೆ ಮಾಡಿದ್ದಾರೆ. ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ್ದಾರೆ. ಹಿಂದೂ, ಕ್ರೈಸ್ತರ ನಡುವೆ ಗಲಭೆ ಸೃಷ್ಟಿಸಲು ಪ್ರಚೋದಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಶಾಂತಿ, ನೆಮ್ಮದಿಗೆ ಭಂಗ ತರಲು ಪ್ರಯತ್ನಿಸಿದ್ದರು ಎಂದು ಪಾಂಡೇಶ್ವರ ಠಾಣೆ ಪೊಲೀಸರು ದಾಖಲಿಸಿರುವ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.