ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಧಾರ್ಮಿಕ ದ್ವೇಷ ಹರಡುವ ಯತ್ನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.
ಸಿಟಿ ರವಿ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಧಾರ್ಮಿಕ ದ್ವೇಷ ಹರಡುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿ, ಕೇಸ್ ದಾಖಲಿಸಲಾಗಿತ್ತು. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ, ಅಧೀನ ನ್ಯಾಯಾಲಯಗಳ ವಿಚಾರಣೆ ರದ್ದುಪಡಿಸುವಂತೆ ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ.