ಬೆಂಗಳೂರು: ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಎನ್ನುವಂತೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವನ್ನು ಮತ್ತೆ ವಿಸ್ತರಣೆ ಮಾಡಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸದ್ದು, ದಿನಾಂಕ 01-04-2019ಕ್ಕಿಂತ ಪೂರ್ವದಲ್ಲಿ ನೋಂದಣಿಯಾಗಿರುವ ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ಸರ್ಕಾರ ದಿನಾಂಕ 17-08-2023ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಅಲ್ಲದೇ ಕಾಲಮಿತಿಯನ್ನು ನಿಗದಿ ಪಡಿಸಿತ್ತು ಎಂದಿದೆ.
ಇನ್ನೂ ಅನೇಕ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ದಿನಾಂಕ 31-03-2025ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿದಂತ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಅಂತ ತಿಳಿಸಿದೆ.
BREAKING: ಮಾನನಷ್ಟ ಪ್ರಕರಣದಲ್ಲಿ IAS ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್: ಮಧ್ಯಂತರ ತಡೆಯಾಜ್ಞೆ