ಬೆಂಗಳೂರು: ಈಗಾಗಲೇ ಹಲವು ಬಾರಿ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿತ್ತು. ಈಗ ಮತ್ತೊಮ್ಮೆ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆಪ್ಟೆಂಬರ್.15ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ.
ರಾಜ್ಯ ಸರ್ಕಾರದಿಂದ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸೋದನ್ನು ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಕಡ್ಡಾಯಗೊಳಿಸಲಾಗಿತ್ತು. ಕರ್ನಾಟಕದಲ್ಲಿ ಈ ಆದೇಶವನ್ನು ಜಾರಿಗೊಳಿಸಲಾಗಿದೆ. ಈಗಾಗಲೇ ಅನೇಕ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕೂಡ ಅಳವಡಿಸಿಕೊಂಡಿದ್ದಾರೆ. ಇನ್ನೂ ಕೆಲವರು ಅಳವಡಿಸಿಕೊಳ್ಳೋದು ಬಾಕಿ ಇದೆ.
ಈ ಹಿನ್ನಲೆಯಲ್ಲಿ ಈ ಹಿಂದೆ ಕರ್ನಾಟಕ ಹೈಕೋಟ್ರ್ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದವರ ವಿರುದ್ಧ ಜುಲೈ.4ರವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಜೊತೆಗೆ ಗಡವುನ್ನು ವಿಸ್ತರಿಸಲು ಒಪ್ಪಿಗೆ ನೀಡಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಸೆಪ್ಟೆಂಬರ್.15ರವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ ಮಾಡಿ ಆದೇಶಿಸಿದೆ. ಈ ಮೂಲಕ ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದೆ.
BREAKING : ಬಂಧನವಾಗಿ 9 ದಿನಗಳ ಬಳಿಕ ದರ್ಶನ್ ನೋಡಲು ಪೊಲೀಸ್ ಠಾಣೆಗೆ ಬಂದ ಪತ್ನಿ ವಿಜಯಲಕ್ಷ್ಮಿ| Vijayalakshmi