ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪದಡಿ ನಳೀನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದಂತ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಈ ಆದೇಶವನ್ನು ಸುಪ್ರೀಂ ಕೋರ್ಟ್ ಕೂಡ ಎತ್ತಿ ಹಿಡಿಯುವ ಮೂಲಕ ನಳೀನ್ ಕುಮಾರ್ ಕಟೀಲ್ ಗೆ ಬಿಗ್ ರಿಲೀಫ್ ನೀಡಿದೆ.
ಸೀತಾರಾಮನ್ ಮತ್ತು ಇತರರು ಚುನಾವಣಾ ಬಾಂಡ್‌ಗಳ ಸೋಗಿನಲ್ಲಿ ಸುಲಿಗೆ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಸಂಘಟನೆಯ (ಜೆಎಸ್‌ಪಿ) ಆದರ್ಶ ಅಯ್ಯರ್ ಅವರು ದೂರು ದಾಖಲಿಸಿದ್ದರು. ಈ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು.
ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಈ ಅರ್ಜಿಯ ವಿಚಾರಣೆ ನಡೆಸಿ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪದಡಿ ದಾಖಲಾಗಿದ್ದಂತ ಎಫ್ಐಆರ್ ರದ್ದುಗೊಳಿಸಲಾಗಿತ್ತು.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಜನಾಧಿಕಾರ ಸಂಘರ್ಷ ಸಂಘಟನೆಯ (ಜೆಎಸ್‌ಪಿ) ಆದರ್ಶ ಅಯ್ಯರ್ ಅವರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ಅಸ್ಪಷ್ಟ ದೂರು, ಸಂಪೂರ್ಣ ಊಹೆಯಿಂದ ಕೂಡಿದ ದೂರು ಎಂಬುದಾಗಿ ಅಭಿಪ್ರಾಯ ಪಟ್ಟಿತು. ಅಲ್ಲದೇ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದು, ಆದರ್ಶ್ ಅಯ್ಯರ್ ಸಲ್ಲಿಸಿದ್ದಂತ ಮೇಲ್ಮನವಿಯನ್ನು ವಜಾಗೊಳಿಸಿದೆ. ಈ ಮೂಲಕ ನಳೀನ್ ಕುಮಾರ್ ಕಟೀಲ್ ಗೆ ಬಿಗ್ ರಿಲೀಫ್ ನೀಡಿದೆ.
BREAKING: ಬೆಂಗಳೂರಲ್ಲಿ RTO ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 30 ಐಶಾರಾಮಿ ಕಾರು ಸೀಜ್