ಬೆಂಗಳೂರು: ನಗರದ ಜಿಆರ್ ಫಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಕೇಸ್ ಸಂಬಂಧ ತೆಲುಗು ನಟಿ ಹೇಮಾ ವಿರುದ್ಧ ದಾಖಲಾಗಿದ್ದಂತ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ನಟಿ ಹೇಮಾಗೆ ರೇವ್ ಪಾರ್ಟಿ ಕೇಸಲ್ಲಿ ಬಿಗ್ ರಿಲೀಫ್ ನೀಡಿದೆ.
ಬೆಂಗಳೂರಲ್ಲಿ ನಡೆದಿದ್ದಂತ ರೇವ್ ಪಾರ್ಟಿ ಪ್ರಕರಣ ಸಂಬಂಧ ತೆಲುಗು ನಟಿ ಹೇಮಾ ಅವರ ವಿರುದ್ಧ ಕೇಸ್ ದಾಖಲಾಗಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನದ ಬಳಿಕ, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಈ ಪ್ರಕರಣಕ್ಕೆ ತಡೆಯಾಜ್ಞೆ ಕೋರಿ ತೆಲುಗು ನಟಿ ಹೇಮಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ನಟಿ ಹೇಮಾ ವಿರುದ್ಧದ ರೇವ್ ಪಾರ್ಟಿ ಪ್ರಕರಣಕ್ಕೆ ತಡೆಯಾಜ್ಞೆ ನೀಡಿದೆ. ಈ ಮೂಲಕ ತೆಲುಗು ನಟಿ ಹೇಮಾಗೆ ಬಿಗ್ ರಿಲೀಫ್ ನೀಡಿದೆ.
BREAKING : ಬೆಂಗಳೂರು ಜನತೆಗೆ ಬಿಗ್ ಶಾಕ್ : ನೀರಿನ ದರ ಏರಿಕೆ ಬಹುತೇಕ ಫಿಕ್ಸ್ : ಜ.2ನೇ ವಾರ ದರ ಏರಿಕೆ ಸಾಧ್ಯತೆ!