ಬೆಂಗಳೂರು: ರಾಜ್ಯ ಸರ್ಕಾರದಿಂದ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ಮತ್ತೆ ವಿಸ್ತರಿಸಿ ಆದೇಶಿಸಿದೆ. ಈ ಮೂಲಕ ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಅನ್ನು ನೀಡಿದೆ.
ಇಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ( High Security Registration Plates-HSRP)ಯನ್ನು ವಾಹನಗಳಿಗೆ ಅಳವಡಿಸಿಕೊಳ್ಳಲು ದಿನಾಂಕ 17-08-2024ರವರೆಗೆ ಅವಕಾಶ ನೀಡಲಾಗಿತ್ತು. ಇಂತಹ ಅವಧಿಯನ್ನು ದಿನಾಂಕ 30-11-2024ರವರೆಗೆ ವಿಸ್ತರಿಸಿ ಆದೇಶಿಸಿರುವುದಾಗಿ ತಿಳಿಸಿದೆ.
ಇನ್ನೂ ಈ ಆದೇಶವು ದಿನಾಂಕ 17-08-2023ರಂದು ಹೊರಡಿಸಿದಂತ ಅಧಿಸೂಚನೆಯ ನಿಯಮಗಳಿಗೆ ಒಳಪಟ್ಟಿರುವುದಾಗಿ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಸೆನ್ಸೆಕ್ಸ್ 1,400 ಅಂಕಗಳ ಕುಸಿತ, ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ. ನಷ್ಟ | Share Market Updates
BREAKING : ‘ತೀವ್ರ ಕಳವಳ’ : ಕೆನಡಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರಕ್ಕೆ ‘ಭಾರತ’ ಖಂಡನೆ