ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಇತರೆ ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅದೇ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಆದೇಶಿಸಿದೆ.
ಇಂದು ಈ ಸಂಬಂಧ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದ ಶಿಕ್ಷೆಯನ್ನು ಅಮಾನತ್ತಿನಲ್ಲಿ ಇಡಲು ಆದೇಶಿಸಿದೆ.
ಇನ್ನೂ ಹೈಕೋರ್ಟ್ ನಿಂದ ದಂಡದ ಮೊತ್ತವನ್ನು ಶೇ.25ರಷ್ಟು ಕೋರ್ಟ್ ಗೆ ಠೇವಣಿ ಇಡಲು ಸೂಚಿಸಿದೆ. ಈ ಮೂಲಕ ಶಾಸಕ ಸತೀಶ್ ಸೈಲ್ ಹಾಗೂ ಇತರರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಅಂದಹಾಗೇ ಈ ಕೇಸಲ್ಲಿ ಸತೀಶ್ ಸೈಲ್ ಗೆ 7 ವರ್ಷ ಶಿಕ್ಷೆಯನ್ನು ಕೋಟಿ ಕೋಟಿ ದಂಡವನ್ನು ವಿಧಿಸಲಾಗಿತ್ತು.
BREAKING: ಮುಡಾ ಕೇಸ್ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ FIR ದಾಖಲು
ಸಾರ್ವಜನಿಕರಿಗೆ ಮಹತ್ವದ ಮಾಹಿತಿ: ಈ ಹಂತ ಅನುಸರಿಸಿ, ‘ಇ-ಖಾತಾ’ ಪಡೆಯಲು ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಿ | E-Khata