ಬೆಂಗಳೂರು : ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್ ಎದುರಾಗಿದ್ದು, ಬೆಳ್ಳುಳ್ಳಿ ಹಾಗೂ ಈರುಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಬೆಳ್ಳುಳ್ಳಿ ದರ ಕೆಜಿಗೆ 400 ರೂ. ಗಡಿ ದಾಟಿದ್ರೆ, ಈರುಳ್ಳಿ ದರ ಕೆಜಿಗೆ60 ರೂ.ಗೆ ಮಾರಾಟವಾಗುತ್ತಿದೆ.
ದೇಶದ ಒಟ್ಟು ಬೆಳ್ಳುಳ್ಳಿ ಉತ್ಪಾದನೆಯಲ್ಲಿ ಮಧ್ಯಪ್ರದೇಶ ಶೇಕಡ 70ರಷ್ಟು ಪಾಲು ಹೊಂದಿದೆ. ಮಧ್ಯಪ್ರದೇಶದಿಂದ ಆವಕ ಇಳಿಕೆಯಾಗಿರುವುದರಿಂದ ಬೆಳ್ಳುಳ್ಳಿ ಬೆಲೆ 400 ರ ಗಡಿ ದಾಟಿದೆ. ರಾಜ್ಯದಲ್ಲಿ ಮಳೆಯಿಂದ ಬೆಳ್ಳುಳ್ಳಿ ಬೆಳೆ ಹಾಳಾಗಿದ್ದು, ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ. ಕೇಂದ್ರ ಸರ್ಕಾರ ದೇಶದ ರೈತರ ಹಿತ ದೃಷ್ಟಿಯಿಂದ ಬೆಳ್ಳುಳ್ಳಿ ಮೇಲಿನ ಆಮದು ಸುಂಕವನ್ನು 100ರಷ್ಟು ಹೆಚ್ಚಿಸಿದೆ.
ಈರುಳ್ಳಿ ದರ ಕೂಡ ಏರಿಕೆ ಕಂಡಿದ್ದು, ಭಾರಿ ಮಳೆಯಿಂದ ಗುಣಮಟ್ಟದ ಈರುಳ್ಳಿ ಮಾರುಕಟ್ಟೆಗೆ ಪೂರೈಕೆ ಆಗುತ್ತಿಲ್ಲ. ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ದರ 52 ರೂ. ದಾಟಿದ್ದು, ಸೂಪರ್ ಮಾರ್ಕೆಟ್ ಗಳಲ್ಲಿ 60 ರೂ.ಗೆ ಮಾರಾಟ ಮಾಡಲಾಗುತ್ತಿದೆ.