ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವಂತ ಪೋಕ್ಸೋ ಕೇಸ್ ಪ್ರಕರಣದಲ್ಲಿ ನೀಡಲಾಗಿರುವಂತ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ ವ್ಯಕ್ತ ಪಡಿಸಿದೆ. ಈ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ಶಾಕ್ ನೀಡಲಾಗಿದೆ.
ಇಂದು ಬಿಎಸ್ ಯಡಿಯೂರಪ್ಪ ಅವರು ಪೋಕ್ಸೋ ಕೇಸ್ ನಲ್ಲಿ ನೀಡಲಾಗಿದ್ದಂತ ಸಮನ್ಸ್ ರದ್ದು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ನ್ಯಾಯಪೀಠವು ನಡೆಸಿತು. ತ್ವರಿತ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ನಿರಾಕರಿಸಿದರು.
ಅಂದಹಾಗೇ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ 17 ವರ್ಷದ ಪುತ್ರಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರೋದಾಗಿ ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ದೂರು ಆಧರಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೋಕ್ಸೋ ಕೇಸ್ ದಾಖಲಾಗಿತ್ತು.
BREAKING: ನ.16ರಂದು ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಷರತ್ತು ಬದ್ಧ ಅನುಮತಿ
‘BEd ವ್ಯಾಸಂಗ’ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ‘ದಾಖಲೆಗಳ ಪರಿಶೀಲನೆ’ಗೆ ಮತ್ತೊಂದು ಅವಕಾಶ








