ಬೆಂಗಳೂರು : ರಾಜ್ಯಾದ್ಯಂತ ಬರೋಬ್ಬರಿ 7.76 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಲು ಆಹಾರ ಇಲಾಖೆ ಮುಂದಾಗಿದೆ.
ಆಹಾರ ಇಲಾಖೆಯ ವಿಶೇಷ ಕಾರ್ಯಾಚರಣೆ ವೇಳೆ ರಾಜ್ಯದಲ್ಲಿ ಬರೋಬ್ಬರಿ 7.76 ಲಕ್ಷ ಮಂದಿ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ. ಹೀಗಾಗಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ.
ಇಂದು ಆಹಾರ ಇಲಾಖೆಯ ಸಭೆ ನಡೆಯಲಿದ್ದು, ಸಭೆಯಲ್ಲಿ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯ ಸರ್ಕಾರ ಗುರುತಿಸಿದ್ದ ಅನರ್ಹ ಪಡಿತರ ಚೀಟಿಗಳನ್ನು ಕೂಡ ರದ್ದು ಪಡಿಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.
ಬೆಂಗಳೂರು ನಗರದಲ್ಲೇ 1 ಲಕ್ಷಕ್ಕೂ ಅಧಿಕ ಮಂದಿ ಬಿಪಿಎಲ್ ಕಾರ್ಡ್ ಹೊಂದಿರುವುದು ಪತ್ತೆಯಾಗಿದೆ. ಇಲಾಖೆ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 7.76 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಲು ತೀರ್ಮಾನಿಸಲಾಗಿದೆ.