ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿದು, ಸರ್ಕಾರ ಆದೇಶಿಸಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ ನೀಡಲಾಗಿದೆ.
ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿಯವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಲಾಗಿದೆ ಎಂದಿದ್ದಾರೆ.
ಆದಾಗ್ಯೂ, ಕೆಲವು ನೇಮಕಾತಿ ಪ್ರಾಧಿಕಾರಗಳು ಈ ಸೂಚನೆಗಳನ್ನು ಉಲ್ಲಂಘಿಸಿ ನೇರ ನೇಮಕಾತಿ ಮಾಡಲು ಹೊಸ ಅಧಿಸೂಚನೆಗಳನ್ನು ಹೊರಡಿಸಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ದಿನಾಂಕ:25.11.2024ರ ನಂತರ ನೇರ ನೇಮಕಾತಿಗಾಗಿ ಯಾವುದೇ ಹೊಸ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಿದ್ದಾರೆ.
ಮುಂದುವರೆದು, ದಿನಾಂಕ:25.11.2024ರ ಸುತ್ತೋಲೆಯನ್ನು ಉಲ್ಲಂಘಿಸುವ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಆಯಾಯ ಆಡಳಿತ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ ನೀಡಲಾಗಿದೆ.
BREAKING: 10 & 12 ನೇ ತರಗತಿಯ ಹೊಸ ಪಠ್ಯಕ್ರಮವನ್ನು ಬಿಡುಗಡೆ ಮಾಡಿದ CBSE | New Syllabus For 10th, 12th