ಬೆಂಗಳೂರು: ರಾಜ್ಯ ಸರ್ಕಾರದಿಂದ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿಗೆ ಬಿಗ್ ಶಾಕ್ ಎನ್ನುವಂತೆ ಸಂಪುಟ ದರ್ಜೆಯ ಸ್ಥಾನಮಾನ ಹಿಂಪಡೆದು ರಾಜ್ಯ ಸರ್ಕಾರ ಆದೇಶಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನಾಡೋಜ ಡಾ: ಮಹೇಶ್ ಜೋಶಿ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಇವರಿಗೆ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 49 ಶಿಸನೇ 2022 ದಿನಾಂಕ: 03.08.2022 ಹಾಗೂ ಸಿಆಸುಇ 01 ಶಿಸನೇ 2023 ದಿನಾಂಕ: 05.01.2023 ರಲ್ಲಿ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ತಿಳಿಸಿದೆ.
‘ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್’ಗೂ ಮುನ್ನ ಹೊಸ ಕ್ರಿಕೆಟ್ ನಿಯಮ ಪರಿಚಯಿಸಿದ ‘ICC’
SHOCKING : ಚಾಮರಾಜನಗರ : ಕಾಂಪೌಂಡ್ ಸರಳಿಗೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!