ರಾಜ್ಯ ಸರ್ಕಾರದಿಂದ ವಾಹನ ಸವಾರರಿಗೆ ಬಿಗ್ ಶಾಕ್ : ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಸಿದ್ಧತೆ – Kannada News Now


State

ರಾಜ್ಯ ಸರ್ಕಾರದಿಂದ ವಾಹನ ಸವಾರರಿಗೆ ಬಿಗ್ ಶಾಕ್ : ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಸಿದ್ಧತೆ

ಬೆಂಗಳೂರು : ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ವಾಹನ ಮಾಲೀಕರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದ್ದು, ರಾಜ್ಯದ 17 ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ದೇಶಾದ್ಯಂತ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ವ್ಯಾಪಾರ ವಹಿವಾಟಿಲ್ಲದೆ ಅನೇಕ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ನಾಲ್ಕನೇ ಹಂತದ ಲಾಕ್ ಡೌನ್ ಜಾರಿ ಸಂದರ್ಭದಲ್ಲಿ ಕೆಲವೊಂದು ಸಡಿಲಿಕೆ ನೀಡಲಾಗಿದ್ದು, ವಾಹನ ಸಂಚಾರಕ್ಕೂ ಅವಕಾಶ ಮಾಡಿಕೊಟ್ಟಿದೆ.

ರಾಜ್ಯದಲ್ಲಿ ಖಾಸಗಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು, 17 ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಇದರಿಂದ ವಾರ್ಷಿಕ 68 ರಿಂದ 70 ಕೋಟಿ ರೂ. ಆದಾಯ ಬರುವ ನಿರೀಕ್ಷೆ ಇದೆ ಎನ್ನಲಾಗಿದೆ.