ಬೆಳಗಾವಿ : ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಭರ್ಜರಿ ಗೆಲುವು ಸಾಧಿಸಿದ್ದು, ಬೆಳಗಾವಿಯಲ್ಲಿ ಮತ್ತೆ ಪಾರುಪತ್ಯ ಮೆರೆದಿದ್ದಾರೆ. ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಜಾರಕಿಹೊಳಿ ಬಣದ ಒಂಬತ್ತು ಜನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 16 ನಿರ್ದೇಶಕ ಸ್ಥಾನಗಳ ಪೈಕಿ 9 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು.
2 ನಾಮಪತ್ರ ವಾಪಸ್ ಪಡಿಸುವಲ್ಲಿ ಬಾಲಚಂದ್ರ ಜಾರಕಿಹೊಳಿ ಯಶಸ್ವಿಯಾಗಿದ್ದಾರೆ. ಕಾಗವಾಡದಿಂದ ರಾಜುಕಾಗೆ, ಚಿಕ್ಕೋಡಿ ಇಂದ ಗಣೇಶ ಹುಕ್ಕೇರಿ, ಯರಗಟ್ಟಿ ತಾಲೂಕಿನಿಂದ ವಿಶ್ವಾಸ ವೈದ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು ಗೋಕಾಕ್ ನಿಂದ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ, ಬೆಳಗಾವಿ ತಾಲೂಕಿನಿಂದ ಸಚಿವ ಸತೀಶ್ ಪುತ್ರ ರಾಹುಲ್ ಜಾರಕಿಹೊಳಿ ಆಯ್ಕೆಯಾಗಿದ್ದು, ಮೂಡಲಗಿಯಿಂದ ನೀಲಕಂಠ, ಸವದತ್ತಿಯಿಂದ ವಿರುಪಾಕ್ಷ ಮಾಮನಿ, ಖಾನಾಪುರ ತಾಲೂಕಿನಿಂದ ಅರವಿಂದ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಾಮಾನ್ಯ ಕ್ಷೇತ್ರದಿಂದ ಚನ್ನರಾಜ ಹಟ್ಟಿಹೊಳಿ ವಿರೋಧವಾಗಿ ಆಯ್ಕೆಯಾಗಿದ್ದಾರೆ ಜಾರಕಿಹೊಳಿ ಬಣದ ವಿರುದ್ಧ ರಮೇಶ್ ಕತ್ತಿ ಹಾಗೂ ಸವದಿ ಚುನಾವಣಾ ಅಸ್ತ್ರ ಪ್ರಯೋಗಿಸಿದ್ದರು 9 ಸ್ಥಾನಗಳಲ್ಲಿ ಜಾರಕಿಹೊಳಿ ಬಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಕ್ಟೋಬರ್ 19 ರಂದು ರಾಮದುರ್ಗ, ಅಥಣಿ, ರಾಯಭಾಗ, ನಿಪ್ಪಾಣಿ, ಬೈಲಹೊಂಗಲ ಹಾಗು ಕಿತ್ತೂರು ತಾಲೂಕಿನಲ್ಲಿ ನಿರ್ದೇಶಕರ ಸ್ಥಾನಕ್ಕೆ ಮತದಾನ ನಡೆಯಲಿದೆ .








