ಬೆಂಗಳೂರು : ಹೊಸ ವರ್ಷಕ್ಕೂ ಮುನ್ನವೇ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಮುಂದಿನ 6 ತಿಂಗಳು ಯಾವುದೇ ಮುಷ್ಕರ ನಡೆಸದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಆಗತ್ಯ ಸೇವಾ ನಿರ್ವಾಹಣೆ ಕಾಯ್ದೆ 2013 ರ ಅಡಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇಂದು(ಡಿಸೆಂಬರ್ 29) ಆದೇಶ ಹೊರಡಿಸಿದೆ. 2023ರ ಜ.1ರಿಂದ 2023ರ ಜೂ.30ರವರೆಗೆ ನಿಗಮದಲ್ಲಿ ಮುಷ್ಕರ ನಿರ್ಬಂಧಿಸಿ ಅಧಿಸೂಚನೆ ಹೊರಡಿಸಿದ್ದು,. ಈ ಸಂಬಂಧ ಸರ್ಕಾರದ ಅಧಿಸೂಚನೆ ಪ್ರತಿಯನ್ನ ಎಲ್ಲ ಘಟಕ, ಕಾರ್ಯಗಾರ, ಕಚೇರಿ ಬಸ್ ನಿಲ್ದಾಣಗಳ ಸೂಚನ ಫಲಕಗಳಲ್ಲಿ ತಪ್ಪದೆ ಪ್ರಕಟಿಸುವಂತೆ ಸೂಚನೆ ನೀಡಿದೆ.
ವಿವಿಧ ಬೇಡಿಕೆಗಳ ಈಡೇರಿಸುವಂತೆ ಸಾರಿಗೆ ನೌಕರರು ಕಳೆದ ಕೆಲವು ದಿನಗಳಿಂದ ಬೆಳಗಾವಿಯಲ್ಲಿ ಭಾರೀ ಪ್ರತಿಭಟನೆ ನಡೆಸುತ್ತಿದ್ದರು.ಸುವರ್ಣಸೌಧದ ಎದುರು ಸಾರಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ವೈದ್ಯಕೀಯ ಸೌಲಭ್ಯ , ಗ್ರಾಚ್ಯೂಟಿ ಹಣ, ಸೇರಿ ಹಲವು ವಿವಿಧ ಬೇಡಿಕೆಗಳ ಈಡೇರಿಗೆಕೆ ಆಗ್ರಹಿಸಿ ಮತ್ತೆ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.
ಇದೀಗ ಹೊಸ ವರ್ಷಕ್ಕೂ ಮುನ್ನವೇ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಮುಂದಿನ 6 ತಿಂಗಳು ಯಾವುದೇ ಮುಷ್ಕರ ನಡೆಸದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಾರಿಗೆ ಸೇವೆಯನ್ನು ಲಾಭದಾಯಕವಾಗಿ ಮಾಡಲು ಕ್ರಮ
ಸಾರಿಗೆ ಸೇವೆಯನ್ನು ಲಾಭದಾಯಕವಾಗಿ ಮಾಡಲು ಕ್ರಮ ವಹಿಸಲಾಗುವುದು. ಖಾಸಗಿ ಸಾರಿಗೆಗೆ ಪೈಪೋಟಿ ನೀಡುವಂತೆ ಸಾರಿಗೆ ಸಂಸ್ಥೆಗಳಲ್ಲಿ ಸುಧಾರಣೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅವರು ನಿನ್ನೆ ನಡೆದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಬೆಳಗಾವಿ ವಿಭಾಗ ಬೆಳಗಾವಿ ಇವರ ವತಿಯಿಂದ “ಕೇಂದ್ರ ಬಸ್ ನಿಲ್ದಾಣ ಆವರಣದಲ್ಲಿ ಆಯೋಜಿಸಿರುವ ಬೆಳಗಾವಿ ನೂತನ ಕೇಂದ್ರ ಬಸ್ ನಿಲ್ದಾಣವನ್ನು ಉದ್ಘಾಟಿಸಿ, ಮಂಗಳವಾರ ಮಾತನಾಡಿ, ಕೆ ಎಸ್ ಆರ್ ಟಿ ಸಿ ಸುಧಾರಣೆಗಾಗಿ ನಿವೃತ್ತ ಅಧಿಕಾರಿ ಶ್ರೀನಿವಾಸಮೂರ್ತಿ ನೇತೃತ್ವದ ಸಮಿತಿ ವರದಿ ಕೊಟ್ಡಿದೆ. ವರದಿಯ ಅನುಷ್ಠಾನದ ಜವಾಬ್ದಾರಿಯನ್ನು ಸಹ ಅವರಿಗೆ ನೀಡಲಾಗಿದೆ. ಸಾರಿಗೆ ಸೇವೆಯಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸಿ, ಅನಾವಶ್ಯಕ ವೆಚ್ಚಗಳಿಗೆ ಕಡಿವಾಣ ಹಾಕಲಾಗುವುದು. ರಾಜ್ಯದ ರಸ್ತೆ ಸಾರಿಗೆಯ ವಿವಿಧ ಸಂಸ್ಥೆ, ಬಿಎಂಟಿಸಿ ಸೇರಿದಂತೆ ಸರ್ಕಾರಿ ಸಾರಿಗೆ ಸೇವೆಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆಗಳನ್ನು ಕಾಣಲಿದೆ.
ಶಾಲೆಗೆ ಹೋಗುವ ಮಕ್ಕಳಿಗೆ ಹೊಸ ಯೋಜನೆ ಘೊಷಣೆ ಮಾಡಲು ಚರ್ಚಿಸಲಾಗುವುದು. ವಾಯುವ್ಯ ಸಾರಿಗೆ ಬೆಳ್ಳಿ ಹಬ್ಬ ಆಚರಿಸಲಿದ್ದು, ಬರುವ ಬಜೆಟ್ನಲ್ಲಿ 500 ಬಸ್ ಖರೀದಿಗೆ ಹಾಗೂ 500 ಸಿಬ್ಬಂದಿ ನೇಮಕ ಮಾಡಲು ಅನುಮತಿ ನೀಡುವ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.