ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ : ರಾಜ್ಯ ಸರ್ಕಾರದಿಂದ 2020-21ನೇ ಸಾಲಿನ ಎಲ್ಲಾ ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ಬ್ರೇಕ್ – Kannada News Now


Jobs State

ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ : ರಾಜ್ಯ ಸರ್ಕಾರದಿಂದ 2020-21ನೇ ಸಾಲಿನ ಎಲ್ಲಾ ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ಬ್ರೇಕ್

ಬೆಂಗಳೂರು : ಕೋವಿಡ್-19 ಹಿನ್ನಲೆಯಲ್ಲಿ ಸರ್ಕಾರದ ವೆಚ್ಚದಲ್ಲಿ ಮಿತವ್ಯಯ ಪಾಲಿಸುವ ಸಂಬಂಧ ರಾಜ್ಯ ಸರ್ಕಾರ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆಹಿಯಿಯಲಾಗಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ ನೀಡಿದೆ.

ನಾಳೆ ದೇಶಾದ್ಯಂತ NEET ಪರೀಕ್ಷೆ : ಇವು ವಿದ್ಯಾರ್ಥಿಗಳು ಪಾಲಿಸಬೇಕಾದ ಕ್ರಮಗಳು

ಈ ಕುರಿತಂತೆ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿರುವ ಆರ್ಥಿಕ ಇಲಾಖೆಯ ವಿಶೇಷಾಧಿಕಾರಿ ಮುರಳೀಧರ.ಸಿ ಅವರು, ಕೋವಿಡ್-19ನಿಂದಾಗಿ ಉಂಟಾಗಿರುವ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ 2020-21ನೇ ಸಾಲಿನಲ್ಲಿ ಯಾವುದೇ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆ ಹಿಡಿಯಲಾಗಿದೆ.

ಬೆಂಗಳೂರಿನಲ್ಲಿ ಹೆಮ್ಮಾರಿ ಕೊರೊನಾ ನರ್ತನ : ಇಂದು 3552 ಪಾಸಿಟಿವ್ ಕೇಸ್ ಪತ್ತೆ, 21 ಬಲಿ

ಅನುಕಂಪದ ಆಧಾರದ ನೇಮಕಾತಿ ಪ್ರಕರಣಗಳಲ್ಲಿ 2020-21ನೇ ಸಾಲಿನಲ್ಲಿ ಅರ್ಜಿಗಳನ್ನು ಸ್ವೀಕರಿಸಲು ಆರ್ಥಿಕ ಇಲಾಖೆಯು ಸಹಮತಿಸಿದ್ದು, ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಮುಂದಿನ ಆರ್ಥಿಕ ವರ್ಷದಲ್ಲಿ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ ನೀಡಿದೆ.

-ವಸಂತ ಬಿ ಈಶ್ವರಗೆರೆ




error: Content is protected !!