ಬೆಂಗಳೂರು: ಬಹುನಿರೀಕ್ಷಿತ ಬೆಂಗಳೂರು-ಮೈಸೂರು ನಡುವೆ ನಿರ್ಮಾಣ ವಾಗಿರುವ ದಶಪಥ ಎಕ್ಸ್ಪ್ರೆಸ್ ವೇಯನ್ನು ಮುಂದಿನ ತಿಂಗಳು ಲೋಕಾರ್ಪಣೆಯಾಗಲಿದೆ.
ಈಗಾಗಲೇ ಉದ್ಘಾಟನೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ ಉದ್ಘಾಟನೆಗೂ ಮುನ್ನ ಸವಾರರಿಗೆ ಬಿಗ್ ಶಾಕ್ ನೀಡಿದ್ದಾರೆ. ಬೈಕ್, ಆಟೋ ಗೂಡ್ಸ್ ಸವಾರರರಿಗೆ ಶಾಕ್ ನೀಡಿದ್ದಾರೆ. ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೈವೆಯಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಸರ್ವಿಸ್ ರಸ್ತೆ ಆಗೋವರೆಗೂ ಮಾತ್ರ ಅವಕಾಶ ನೀಡಲಾಗಿದೆ. ನಂತರ ಸರ್ವಿಸ್ ರಸ್ತೆ ನಿರ್ಮಾಣ ವಾದ್ರೆ ನಿರ್ಬಂಧ ಹೇರಲಾಗುವುದು. ಆಕ್ಸಿಡೆಂಟ್ ಫ್ರೀ ರಸ್ತೆ ಮಾಡುವುದಕ್ಕಾಗಿ ಈ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.