ಬೆಂಗಳೂರು: ನಟ, ಮಾಜಿ ಸಂಸದ ಕಾಂಗ್ರೆಸ್ ಪಾರ್ಟಿ ಬಿಟ್ಟು ಬಿಜೆಪಿಯನ್ನು ಸೇರಿದ್ದಾರೆ. ಇಂದು ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಶಶಿಕುಮಾರ್, ಮುದ್ದಹನುಮೇಗೌಡ ಹಾಗು ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಸೇವಾದಳ ಉಪಾಧ್ಯಕ್ಷ ಹನುಮಂತರಾವ್, ಕಾಂಗ್ರೆಸ್ ನ ವೆಂಕಟಾಚಲಯ್ಯ, ಎಸ್ಪಿ ಪ್ರಧಾನ ಕಾರ್ಯದರ್ಶಿ, ರವಿಕುಮಾರ್, ರೈತ ಸಂಘ, ದಲಿತ ಸಂಘಟನೆ ಮುಖಂಡರು ಬಿಜೆಪಿ ಸೇರ್ಪಡೆಯಾದರು. ಪಕ್ಷದ ಧ್ವಜ ನೀಡಿ ಶಾಲು ಹೊದಿಸಿ ಪಕ್ಷದ ಪ್ರಾಥಮಿಕ ಸದಸ್ಯತ್ವ ನೀಡಿ ನಾಯಕರನ್ನು ಬಿಜೆಪಿಗೆ ಬರಮಾಡಿಕೊಳ್ಳಲಾಯಿತು.