ಬೆಂಗಳೂರು : ಸರ್ಕಾರಿ ಆಸ್ತಿ ಒತ್ತುವರಿ ಮಾಡಿಕೊಂಡವರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಆಗಸ್ಟ್‌ನಿಂದ ರಾಜ್ಯಾದ್ಯಂತ ಸರ್ಕಾರಿ ಆಸ್ತಿಗಳ ಒತ್ತುವರಿ ತೆರವು ಕಾರ್ಯ ಆರಂಭಿಸಲಾಗುವುದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಸರ್ಕಾರಿ ಜಮೀನುಗಳನ್ನು ಉಳಿಸಬೇಕು ಹಾಗೂ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರೂ ಖಡಕ್ ಸೂಚನೆ ನೀಡಿದ್ದಾರೆ. ಇದೇ ಕಾರಣಕ್ಕೆ “ಬೀಟ್ ಸಿಸ್ಟಂ ಆ್ಯಪ್”ಅನ್ನು ಅಭಿವೃದ್ಧಿಪಡಿಸಲಾಯಿತು. ಈ ಆ್ಯಪ್ ಮೂಲಕ ಈಗಾಗಲೇ ಶೇ.70 ರಷ್ಟು ಸರ್ಕಾರಿ ಜಮೀನನ್ನು ಗುರುತಿಸಲಾಗಿದೆ. ಶೀಘ್ರ ಶೇ.100 ರಷ್ಟು ಜಮೀನನ್ನೂ ಗುರುತಿಸಬೇಕು. ತಹಶೀಲ್ದಾರರೇ ಮುಂದೆ ನಿಂತು ಒತ್ತುವರಿಯನ್ನು ತೆರವುಗೊಳಿಸುವ ಕೆಲಸ ಶುರು ಮಾಡಬೇಕು ಎಂದರು.
ಅಲ್ಲದೆ, ಹಲವು ಕಡೆಗಳಲ್ಲಿ ಕೆರೆ ಮತ್ತು ಸ್ಮಶಾನ ಜಾಗಗಳನ್ನೇ ಒತ್ತುವರಿ ಮಾಡಲಾಗಿದೆ. ಇಂತಹ ಎಲ್ಲಾ ಜಮೀನಿನಲ್ಲೂ ಒತ್ತುವರಿ ತೆರವುಗೊಳಿಸಬೇಕು, ಅಲ್ಲದೆ, ಪ್ರತಿ ಮೂರು ತಿಂಗಳಿಗೊಮ್ಮೆ ಗ್ರಾಮ ಆಡಳಿತ ಅಧಿಕಾರಿಗಳು ಸರ್ಕಾರಿ ಜಮೀನಿಗೆ ಬೀಟ್ ಹಾಕಬೇಕು. ಆ ಮೂಲಕ ಸರ್ಕಾರಿ ಆಸ್ತಿಯನ್ನು ರಕ್ಷಿಸಬೇಕು” ಎಂದು ಅವರು ಒತ್ತಾಯಿಸಿದರು.