ಬೆಂಗಳೂರು: ರಾಜ್ಯದ ಅನೇಕ ಭಾಗಗಳಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡು, ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡು ಕೃಷಿಯಲ್ಲಿ ರೈತರು ತೊಡಗಿದ್ದಾರೆ. ಕೆಲವರು 1, 2 ಎಕರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಕೃಷಿ ಮಾಡ್ತಿದ್ರೆ ಮತ್ತೆ ಕೆಲವರು 3 ಅಥವಾ ಅದಕ್ಕಿಂತ ಹೆಚ್ಚು ಎಕರೆ ಸರ್ಕಾರಿ ಭೂಮಿಯಲ್ಲಿ ಕೃಷಿ ನಡೆಸುತ್ತಿದ್ದಾರೆ. ಇಂತಹ ರೈತರಿಗೆ ಶಾಕಿಂಗ್ ನ್ಯೂಸ್ ಎನ್ನುವಂತೆ 3 ಎಕರೆಗಿಂತ ಹೆಚ್ಚು ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡು ಕೃಷಿ ಮಾಡ್ತಿದ್ರೆ ಅಷ್ಟು ಭೂಮಿ ಸಕ್ರಮವಿಲ್ಲ ಅಂತ ರಾಜ್ಯ ಸರ್ಕಾರ ತಿಳಿಸಿದೆ.
ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದು, ಅರಣ್ಯ ಭೂಮಿಯಲ್ಲಿ ಕೃಷಿ ನಡೆಸುತ್ತಿರುವಂತ ರೈತರಿಗೆ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿದ್ದ 7 ಸಾವಿರ ರೈತರಿಗೆ ಶೀಘ್ರವೇ ಹಕ್ಕುಪತ್ರ ವಿತರಣೆ ಮಾಡೋದಾಗಿ ತಿಳಿಸಿದ್ದಾರೆ.
ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ 1980ರ ಜಾರಿಗೂ ಮುನ್ನ ಕೃಷಿ ಮಾಡುತ್ತಿರೋರಿಗೆ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದೇ ಜನವರಿ ಒಳಗಾಗಿ 7 ಸಾವಿರ ಜನರಿಗೆ ಹಕ್ಕುಪತ್ರ ನೀಡಲಾಗುವುದು ಅಂತ ಹೇಳಿದ್ದಾರೆ.
ಇನ್ನೂ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿರುವ 13,750 ಪ್ರಕರಣಗಳ 31,864 ಎಕರೆ ಭೂಮಿ ಇದೆ. ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಹಕ್ಕು ಪತ್ರ ನೀಡಲಾಗುವುದು. ಆದರೆ 3 ಎಕರೆಗಿಂತ ಹೆಚ್ಚಿನ ಭೂಮಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿರುವ 13,750 ಪ್ರಕರಣಗಳ 31,864 ಎಕರೆ ಭೂಮಿ ಇದೆ. ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಹಕ್ಕು ಪತ್ರ ನೀಡಲಾಗುವುದು. ಆದರೆ 3 ಎಕರೆಗಿಂತ ಹೆಚ್ಚಿನ ಭೂಮಿ ನೀಡುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.#landregistration @eshwar_khandre pic.twitter.com/1moD0XRKbj
— DIPR Karnataka (@KarnatakaVarthe) January 3, 2024