ಕೋಲಾರ್: ಕೋಚಿಮುಲ್‌ ರೈತರ ಹಾಲಿನ ದರವನ್ನು ಲೀಟರ್‌ಗೆ 2 ರೂಪಾಯಿ ಇಳಿಕೆ ಮಾಡಿ ಆದೇಶ ಹೊರಡಿಸಿದ್ದು, ಈ ಮೂಲಕ ಹೈನುಗಾರಿಕೆ ಮಾಡಿಕೊಂಡು ಜೀವನ ನಡೆಸುತ್ತಿದ್ದ ರೈತರ ಆದಾಯಕ್ಕೆ ಕೊಕ್ಕೆ ಬಿದಿದ್ದೆ. ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ (ಕೋಚಿಮುಲ್‌) ರೈತರಿಗೆ ಆಘಾತ ಕೊಟ್ಟಿದ್ದು, ಹಾಲು ಖರೀದಿ ದರ 2 ರೂಪಾಯಿ ಕಡಿತಗೊಳಿಸಿ ಆದೇಶಿಸಿರುವುದರಿಂದ ರೈತರಲ್ಲಿ ಆಕ್ರೋಶ ಮನೆ ಮಾಡಿದೆ.

ಶುಕ್ರವಾರದಿಂದಲೇ ಜಾರಿಗೆ ಬರುವಂತೆ ರೈತರಿಂದ ಖರೀದಿಸುವ ಹಾಲಿನ ದರವನ್ನು 2 ರೂಪಾಯಿ ಕಡಿತಗೊಳಿಸಿ ಆದೇಶಿಸಿದ್ದು, ಪ್ರತಿ ಲೀಟರ್‌ಗೆ ಇನ್ನು ಮುಂದೆ 33.4 ರೂ. ಬದಲಿಗೆ 31.4 ರೂ. ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ.  ಜನವರಿಯಲ್ಲಿ ಪ್ರತಿ ದಿನ ಕೋಚಿಮುಲ್‌ಗೆ 9.65 ಲಕ್ಷ ಲೀಟರ್‌ ಹಾಲು ಸಂಗ್ರಹವಾಗುತ್ತಿತ್ತು. ಆದರೆ ಜೂನ್ ತಿಂಗಳಿನಿಂದ ಪ್ರತಿ ದಿನ ಕೋಚಿಮುಲ್‌ಗೆ 12.37 ಲಕ್ಷ ಲೀಟರ್‌ ಹಾಲು ಸಂಗ್ರಹವಾಗುತ್ತಿದೆ ಈಗಾಗಲೇ ಲೀಟರ್‌ಗೆ 2 ರೂ. ಹೆಚ್ಚಳ ಮಾಡಿ ಕೆಎಂಎಫ್‌ ಆದೇಶ ಹೊರಡಿಸಿದೆ. ಈಗ ರೈತರಿಗೆ 2 ರೂ. ಕಡಿತ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ.

 

 

Share.
Exit mobile version