ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಬಿಗ್ ಶಾಕ್ ನೀಡಲಾಗಿದೆ. ಅದೇ ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿದು ರಾಜ್ಯ ಸರ್ಕಾರ ಆದೇಶಿಸಿದೆ.
ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ದಿನಾಂಕ: 28.10.2024 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಲಾಗಿದೆ ಎಂದಿದ್ದಾರೆ.
ಈ ದಿನಾಂಕದ ಪೂರ್ವದಲ್ಲಿ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದಲ್ಲಿ ಅಥವಾ ಆಯ್ಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದಲ್ಲಿ ಅಂತಹ ನೇಮಕಾತಿಗಳಿಗೆ ಹೊರಡಿಸಲಾಗಿದ್ದ, ಅಧಿಸೂಚನೆಯನ್ವಯವೇ ಪೂರ್ಣಗೊಳಿಸಬಹುದಾಗಿದೆ. ಮೇಲ್ಕಂಡ ಸೂಚನೆಗಳನ್ನು ಎಲ್ಲಾ ಆಯ್ಕೆ ಪ್ರಾಧಿಕಾರಗಳು/ನೇಮಕಾತಿ ಪ್ರಾಧಿಕಾರಗಳು
ಕಟ್ಟುನಿಟ್ಟಾಗಿ ಪಾಲಿಸತಕ್ಕದು ಎಂದು ತಿಳಿಸಿದ್ದಾರೆ.
BREAKING: ಬೆಂಗಳೂರಲ್ಲಿ ಭೀಕರ ಅಪಘಾತ: ಕಾರು ಡಿಕ್ಕಿಯಾಗಿ ಸ್ಥಳದಲ್ಲೇ 3 ವರ್ಷದ ಬಾಲಕ ದುರ್ಮರಣ