ಬೆಂಗಳೂರು : ಗೃಹಜ್ಯೋತಿ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ಎದುರಾಗಿದೆ. 200 ಯೂನಿಟ್‌ಗಿಂತ ಜಾಸ್ತಿ ವಿದ್ಯುತ್ ಬಳಸಿದರೆ, ಬಳಸಿದ ಅಷ್ಟು ಯೂನಿಟ್‌ಗಳಿಗೆ ದುಬಾರಿ ಶುಲ್ಕವನ್ನು ಭರಿಸಬೇಕಾಗಿದೆ.
ಹೌದು, ಬರದ ಬೇಗೆಯಲ್ಲಿ ಬಸವಳಿದಿರುವ, ಬೇಸಿಗೆಯ ಝಳದಲ್ಲಿ ಮರುಗುತ್ತಿರುವ ಕರ್ನಾಟಕದ ಜನತೆಗೆ ಕಾಂಗ್ರೆಸ್ ಸರ್ಕಾರ ಶಾಕ್ ಮೇಲೆ ಶಾಕ್ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.
ಚುನಾವಣೆಗೂ ಮುನ್ನ ಪ್ರತಿ ಮನೆಗೆ 200 ಯೂನಿಟ್ ಕರೆಂಟ್ ಫ್ರೀ ಎಂದು ಹೇಳಿದ್ದ ಕಾಂಗ್ರೆಸ್, ಚುನಾವಣೆ ಬಳಿಕ ಕಂಡಿಷನ್ಸ್ ಅಪ್ಲೈ ಎಂದು ಉಲ್ಟಾ ಹೊಡೆದಿತ್ತು. ಈಗ ಕರ್ನಾಟಕದಲ್ಲಿ ಕಂಡು ಕೇಳರಿಯದಂತಹ ಬಿಸಿಲಿರುವ ಕಾರಣ ಗ್ರಾಹಕರು, 200 ಯೂನಿಟ್‌ಗಿಂತ ಜಾಸ್ತಿ ವಿದ್ಯುತ್ ಬಳಸಿದರೆ, ಬಳಸಿದ ಅಷ್ಟು ಯೂನಿಟ್‌ಗಳಿಗೆ ದುಬಾರಿ ಶುಲ್ಕವನ್ನು ಭರಿಸಬೇಕಾಗಿದೆ. ಗೃಹಜ್ಯೋತಿಯಲ್ಲಿಯೂ ಸಹ ಕಾಂಗ್ರೆಸ್ ಜನಸಾಮಾನ್ಯರನ್ನು ಸುಲಿಗೆ ಮಾಡುತ್ತಿರುವುದು ಅತ್ಯಂತ ನಾಚಿಕೆಗೇಡು ಎಂದು ಕಿಡಿಕಾರಿದೆ.