ಬೆಂಗಳೂರು : ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಇದೀಗ ಬಿಗ್ ಶಾಕ್ ನೀಡಿದ್ದು, ಏಕ ಸದಸ್ಯ ಪೀಠ ನೀಡಿದ ಮಧ್ಯಂತರ ಆದೇಶಕ್ಕೆ, ಹೈಕೋರ್ಟ್ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ.
ಸಿಜೆ ವಿಭು ಭಕ್ರು ಹಾಗು ನ್ಯಾ.ಸಿಎಂ ಜೋಶಿ ಅವರಿದ್ದ ಪೀಠ ಆದೇಶ ಹೊರಡಿಸಿದೆ.ನವೆಂಬರ್ 26ರ ವರೆಗೆ ಏಕ ಸದಸ್ಯ ಪೀಠದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚನೆಗೆ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಏಕ ಸದಸ್ಯ ಪೀಠದ ಆದೇಶ ಪ್ರಶ್ನೆಗೆ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಹೈಕೋರ್ಟ್ ವಿಭಾಗಿಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿತ್ತು.
ಆರು ಎಕರೆ ಒತ್ತುವ ರೀತಿಯಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ ದಾಖಲೆ ಹಾಜರುಪಡಿಸುವಂತೆ ಎಸ್ಐಟಿ ನೋಟಿಸ್ ಜಾರಿಗೊಳಿಸಿದೆ. ಆದರೆ ಎಸ್ ಐ ಟಿ ರಚನೆಗೆ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿತ್ತು. ಹಾಗಾಗಿ ತಡೆಯಾಜ್ಞೆ ತೆರವಿಗೆ ಎಜಿ ಶಶಿಕಿ ಮನವಿ ಮಾಡಿದ್ದಾರೆ. ಹೈಕೋರ್ಟ್ ಆದೇಶದಿಂದ ತಡೆಯಾಜ್ಞೆ