ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ಬಾಕಿ ವಸೂಲಿ ಮಾಡಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ಮಲ್ಲೇಶ್ವರಂ ಐಪಿಪಿ ಸಭಾಂಗಣ ಕೊಠಡಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಚ್ಚು ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರು ಹಾಗೂ ಪರಿಷ್ಕರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಯಾ ವಲಯ ವ್ಯಾಪ್ತಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡು ಬಾಕಿ ಆಸ್ತಿ ತೆರಿಗೆಯನ್ನು ವಸೂಲಿ ಮಾಡಲು ಸೂಚನೆ ನೀಡಿದರು.
ಆಯಾ ವಲಯಗಳ ಸಹಾಯಕ ಕಂದಾಯ ಅಧಿಕಾರಿ ವ್ಯಾಪ್ತಿವಾರು ಸಭೆ ನಡೆಸಿ, ಉಪ ವಿಭಾಗಗಳ ವ್ಯಾಪ್ತಿಯಲ್ಲಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಾಗೂ ಪರಿಷ್ಕರಣೆ ಪ್ರಕರಣಗಳ ಪಟ್ಟಿಯ ಅನುಸಾರ ಬಾಕಿ ಆಸ್ತಿ ತೆರಿಗೆ ವಸೂಲಿ ಮಾಡಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.
ಒಟಿಎಸ್ ಯೋಜನೆ ಬಗ್ಗೆ ಅರಿವು ಮೂಡಿಸಿ:
ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದು ಬಾರಿ ಪರಿಹಾರ(OTS) ಯೋಜನೆಯಡಿ ಆಸ್ತಿ ತೆರಿಗೆಯ ಬಾಕಿದಾರರಿಗೆ ಬಡ್ಡಿ ಮತ್ತು ದಂಡ ಮನ್ನಾ ಮಾಡಲಾಗಿದ್ದು, ಈ ಯೋಜನೆಯು 30ನೇ ನವೆಂಬರ್ ವರೆಗೆ ಮಾತ್ರ ಜಾರಿಯಲ್ಲಿರಲಿದೆ. ಈ ಸಂಬಂಧ ಪ್ರತಿಯೊಬ್ಬರೂ ಬಾಕಿ ಆಸ್ತಿ ತೆರಿಗೆಯನ್ನು 30ನೇ ನವೆಂಬರ್ ಒಳಗಾಗಿ BBMPtax.karnataka.gov.in ಗೆ ಭೇಟಿ ನೀಡಿ ಪಾವತಿಸಬೇಕು. ಇಲ್ಲವಾದಲ್ಲಿ 1ನೇ ಡಿಸೆಂಬರ್ 2024 ರಿಂದ ಪಾವತಿಸಬೇಕಿರುವ ಬಾಕಿ ಆಸ್ತಿ ತೆರಿಗೆಯು ದುಪ್ಪಟ್ಟಾಗಲಿದೆ ಎಂಬುದರ ಬಗ್ಗೆ ನಾಗರೀಕರಿಲ್ಲಿ ಅರಿವು ಮೂಡಿಸಬೆಕೆಂದು ಸೂಚಿಸಿದರು.
ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ವಿನೋತ್ ಪ್ರಿಯಾ, ಸತೀಶ್, ಸ್ನೇಹಲ್, ಕರೀಗೌಡ, ಅರ್ಚನಾ, ರಮೇಶ್, ಗಿರೀಶ್, ಪ್ರಧಾನ ಅಭಿಯಂತರರು, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಪಾಲ್ಗೊಂಡಿದ್ದರು.
BREAKING: ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆಯಿಂದ 2 ದಿನ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶ
ಸಿಎಂ, ಡಿಸಿಎಂ ವಿರುದ್ಧ ಕುಮಾರಸ್ವಾಮಿ, ದೇವೇಗೌಡರು ವೈಯಕ್ತಿಕ ಆರೋಪಗಳನ್ನು ಮಾಡುತ್ತಿದ್ದಾರೆ: ಚಲುವರಾಯಸ್ವಾಮಿ