Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಜೇಡ ಕಡಿತ’ ಅಪಾಯಕಾರಿಯೇ.? ಜೇಡ ಕಚ್ಚಿದ್ರೆ ಏನಾಗುತ್ತೆ ಗೊತ್ತಾ?

22/03/2026 10:09 PM

ಅಂತರಂಗದ ಬದುಕಿಗೆ ಲಗ್ಗೆ ಇಟ್ಟ AI; ಈಗ ‘AI-ಸೆಕ್ಷುವಲ್’ ಹೊಸ ಟ್ರೆಂಡ್! | AI-sexual

22/03/2026 9:41 PM

ಇಸ್ರೇಲ್ – ಇರಾನ್ ವಾರ್ ಎಫೆಕ್ಟ್; ವಿಮಾನಯಾನ ಸಂಸ್ಥೆಗಳಿಗೆ ಬರೋಬ್ಬರಿ 5,000 ಕೋಟಿ ನಷ್ಟ

22/03/2026 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಅಕ್ರಮ ಪಡಿತರ ಚೀಟಿದಾರರಿಗೆ’ ಬಿಗ್ ಶಾಕ್ : ವಿಶೇಷ ಕಾರ್ಯಾಚರಣೆ ನಡೆಸಿ ಕಾನೂನು ಕ್ರಮ.!
KARNATAKA

ರಾಜ್ಯ ಸರ್ಕಾರದಿಂದ `ಅಕ್ರಮ ಪಡಿತರ ಚೀಟಿದಾರರಿಗೆ’ ಬಿಗ್ ಶಾಕ್ : ವಿಶೇಷ ಕಾರ್ಯಾಚರಣೆ ನಡೆಸಿ ಕಾನೂನು ಕ್ರಮ.!

By kannadanewsnow5711/12/2024 6:06 PM

ಬೆಳಗಾವಿ : ಅಕ್ರಮ ಪಡಿತರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಆರೋಪ ಸಾಬೀತಾದಲ್ಲಿ ನ್ಯಾಯಾಲಯದ ಆದೇಶದಂತೆ ಕಾನೂನು ರೀತಿ ಕ್ರಮ ವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಯ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು.

ವಿಧಾನ ಪರಿಷತನಲ್ಲಿ ಡಿಸೆಂಬರ್ 9ರಂದು ಸದಸ್ಯರಾದ ಟಿ.ಎನ್.ಜವರಾಯಿಗೌಡ, ಐವನ್ ಡಿ ಸೋಜಾ, ಸಿ.ಟಿ.ರವಿ, ಶರವಣ.ಟಿ.ಎ, ನಿರಾಣಿ ರುದ್ರಪ್ರ ಹನುಮಂತಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. ರಾಜ್ಯಾದ್ಯಂತ ಜನವರಿ-2021 ರಿಂದ ಮೇ 2023ರ ಅವಧಿಯಲ್ಲಿ 3,35,463 ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದ್ದು, ಇವರಿಂದ ರೂ. 13,51,30,858 ಗಳ ದಂಡ ವಿಧಿಸಿ, ಅನರ್ಹರಿಗೆ ನೀಡಿದ ಸವಲತ್ತುಗಳಿಂದ ಉಂಟಾದ ನಷ್ಟವನ್ನು ಭರಿಸಲು ಸರ್ಕಾರ ಕ್ರಮವಹಿಸಿದೆ.ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಎಂದು ಇದೇ ಸಂದರ್ಭದಲ್ಲಿ ಸದನಕ್ಕೆ ಅವರು ತಿಳಿಸಿದರು.

ಆಹಾರ ಇಲಾಖೆಯ ಉಗ್ರಾಣಗಳಿಂದ ಅಕ್ರಮವಾಗಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ಕ್ರಮ ವಹಿಸಿದೆ. ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸುವ ಪಡಿತರ ಅಕ್ರಮ ಸಾಗಣೆ ಕಂಡು ಬಂದಲ್ಲಿ ಕೂಡಲೇ ದಾಳಿ ನಡೆಸಿ, ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಪ್ರಕರಣ ದಾಖಲಿಸಿ, ಅಕ್ರಮ ಪಡಿತರ ದಾಸ್ತಾನು ಮುಟ್ಟುಗೋಲು ಹಾಕಿಕೊಂಡು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಮುಟ್ಟುಗೋಲು ದಾಸ್ತಾನನ್ನು ವಿಲೇ ಮಾಡಿ, ವಿಲೇ ಪಡಿಸಿದ ಪಡಿತರ ಮೊತ್ತವನ್ನು ಸರ್ಕಾರಕ್ಕೆ ಜಮೆ ಮಾಡಲಾಗುತ್ತಿದೆ ಎಂದರು.

ರಾಜ್ಯಾದ್ಯಂತ 2024-25ನೇ ಸಾಲಿನಲ್ಲಿ 213 ಎಫ್.ಐ.ಆರ್ ದಾಖಲಿಸಿ ಒಟ್ಟು ರೂ. 2,68,07,872 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು, 238 ಆರೋಪಿಗಳನ್ನು ಬಂಧಿಸಲಾಗಿರುತ್ತದೆ. ಈ ಕುರಿತು ಪರಿಶೀಲಿಸಲು ಮೇಲ್ವಿಚಾರಣೆ ಮಾಡಲು ಇಲಾಖಾ ವತಿಯಿಂದ ನೋಡಲ್ ಅಧಿಕಾರಿಗಳನ್ನು ವಿಭಾಗವಾರು ನೇಮಕ ಮಾಡಲಾಗಿದೆ ಎಂದರು.

ಈ ಹಿಂದೆ ಕೆಲವು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಿದ್ದ ಫಲಾನುಭವಿಗಳು ಹಾಲಿ ಬಡತನ ರೇಖೆಗಿಂತ ಮೇಲೆ ಬಂದಿದ್ದು, ಸದರಿ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.

ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಜಿಎಸ್ ಟಿ ಅಥವಾ ಸಿಎಸ್ ಟಿ ಪಾವತಿದಾರರ ವಿವರಗಳನ್ನು ಕುಟುಂಬ ತಂತ್ರಾಂಶದಿಂದ ಪಡೆದು ದಂಡ ವಸೂಲಿ ಮಾಡಲಾಗುತ್ತಿದೆ ಎಂದು ತಿಳಿಸಿದರು. ಪ್ರಸ್ತುತ ಆಹಾರ ಇಲಾಖೆಯಲ್ಲಿ ಬಳಸುವ ಸರ್ವರ್ ಹಳೆಯದಾಗಿದೆ. ಈ ಕಾರಣದಿಂದಾಗಿ ಎನ್ ಐಸಿಯಿಂದ ಕೆಎಸ್ ಡಿಸಿ ಗೆ ಆಹಾರ ತಂತ್ರಾಂಶದ ಮೈಗ್ರೇಶನ್ ಕಾರ್ಯ ಅಂತಿಮ ಹಂತದಲ್ಲಿದ್ದು, ಈ ಕಾರ್ಯಪೂರ್ಣವಾದ ನಂತರ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಹಾಗೂ ಪಡಿತರ ತಿದ್ದುಪಡಿ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಬಾಕಿ ಅರ್ಜಿಗಳ ಕಾಲಮಿತಿ ವಿಲೇಯ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

Big shock to 'illegal ration card holders' by state government: Special drive to take legal action ರಾಜ್ಯ ಸರ್ಕಾರದಿಂದ `ಅಕ್ರಮ ಪಡಿತರ ಚೀಟಿದಾರರಿಗೆ' ಬಿಗ್ ಶಾಕ್ : ವಿಶೇಷ ಕಾರ್ಯಾಚರಣೆ ನಡೆಸಿ ಕಾನೂನು ಕ್ರಮ.!
Share. Facebook Twitter LinkedIn WhatsApp Email

Related Posts

ದಾವಣಗೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿರುದ್ಧ ಅಲ್ಪಸಂಖ್ಯಾತರ ಆಕ್ರೋಶ; ಕೈ ಪಾಳೆಯದಲ್ಲಿ ಭುಗಿಲೆದ್ದ ಅಸಮಾಧಾನ!

22/03/2026 9:33 PM1 Min Read

BIG NEWS: ಸಾಗರದ ಶೆಡ್ತೀಕೆರೆಯಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ: ರಮೇಶ್ ನಾರಾಯಣ್ ಹಾಗೂ ಇತರ ಶಿಕ್ಷಕರ ವಿರುದ್ಧ ‘ಮಕ್ಕಳ ಆಯೋಗ ಸುಮೋಟೋ ಕೇಸ್’ ದಾಖಲು

22/03/2026 9:07 PM2 Mins Read

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

22/03/2026 8:13 PM1 Min Read
Recent News

‘ಜೇಡ ಕಡಿತ’ ಅಪಾಯಕಾರಿಯೇ.? ಜೇಡ ಕಚ್ಚಿದ್ರೆ ಏನಾಗುತ್ತೆ ಗೊತ್ತಾ?

22/03/2026 10:09 PM

ಅಂತರಂಗದ ಬದುಕಿಗೆ ಲಗ್ಗೆ ಇಟ್ಟ AI; ಈಗ ‘AI-ಸೆಕ್ಷುವಲ್’ ಹೊಸ ಟ್ರೆಂಡ್! | AI-sexual

22/03/2026 9:41 PM

ಇಸ್ರೇಲ್ – ಇರಾನ್ ವಾರ್ ಎಫೆಕ್ಟ್; ವಿಮಾನಯಾನ ಸಂಸ್ಥೆಗಳಿಗೆ ಬರೋಬ್ಬರಿ 5,000 ಕೋಟಿ ನಷ್ಟ

22/03/2026 9:38 PM

ಗುಜರಾತ್ ಸಿಎಂಯಿಂದ ಭಾರತದ ಪ್ರಧಾನಿವರೆಗೆ, 24 ವರ್ಷಗಳ ನಿರಂತರ ಸೇವೆ : ಮೋದಿಯ ‘ಅಚಲ ಸಮರ್ಪಣೆ’ಯ ಸ್ಟೋರಿಯಿದು!

22/03/2026 9:33 PM
State News
KARNATAKA

ದಾವಣಗೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿರುದ್ಧ ಅಲ್ಪಸಂಖ್ಯಾತರ ಆಕ್ರೋಶ; ಕೈ ಪಾಳೆಯದಲ್ಲಿ ಭುಗಿಲೆದ್ದ ಅಸಮಾಧಾನ!

By kannadanewsnow0922/03/2026 9:33 PM KARNATAKA 1 Min Read

ದಾವಣಗೆರೆ: ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿ ದಾವಣಗೆರೆ ಜಿಲ್ಲೆಯಲ್ಲಿ ಹೊಸ ಸಂಚಲನ…

BIG NEWS: ಸಾಗರದ ಶೆಡ್ತೀಕೆರೆಯಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ: ರಮೇಶ್ ನಾರಾಯಣ್ ಹಾಗೂ ಇತರ ಶಿಕ್ಷಕರ ವಿರುದ್ಧ ‘ಮಕ್ಕಳ ಆಯೋಗ ಸುಮೋಟೋ ಕೇಸ್’ ದಾಖಲು

22/03/2026 9:07 PM

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

22/03/2026 8:13 PM

ಸಾಗರದಲ್ಲಿ ಅದ್ದೂರಿಯಾಗಿ ನೆರವೇರಿದ ‘ಶ್ರೀ ಮಹಾಗಣಪತಿ ರಥೋತ್ಸವ’: ಭಕ್ತಿಯ ಪರಾಕಾಷ್ಠೆ, ಸಂಸ್ಕೃತಿಯ ಸಂಗಮ

22/03/2026 7:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.