ಬೆಂಗಳೂರು: ರಾಜ್ಯದಲ್ಲಿ ಅನರ್ಹತೆಯನ್ನು ಹೊಂದಿದ್ದರೂ ಬಿಪಿಎಲ್ ಕಾರ್ಡ್ ಪಡೆದಿರುವಂತವರಿಗೆ ಬಿಗ್ ಶಾಕ್ ಎನ್ನುವಂತೆ ಶೀಘ್ರವೇ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಚಿವ ಕೆ.ಹೆಚ್ ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು, ರಾಜ್ಯದಲ್ಲಿ ಶೇ.80ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಎಪಿಎಲ್ ಕಾರ್ಡ್ ದಾರರು ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಮಾಹಿತಿ ಬಂದಿದೆ. ಅರ್ಹರಲ್ಲದವರೂ ಪಡೆದಿರುವುದು ತಿಳಿದಿದೆ. ಅರ್ಹ ಫಲಾನುಭವಿಗಳ ಹೊರತಾಗಿ, ಅನರ್ಹರಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಬಿಪಿಎಲ್ ಕಾರ್ಡ್ ದಾರರಿಗೆ ಈಗ ಕೊಡುತ್ತಿರುವ ಅಕ್ಕಿ ಮುಂದುವರಿಕೆ ಮಾಡಲಾಗುತ್ತಿದೆ. ಅಕ್ಕಿ ಜೊತೆಗೆ ಬೇಳೆಕಾಳು ನೀಡಬೇಕು ಎನ್ನುವಂತ ಬೇಡಿಕೆ ಇದೆ. ಈ ಬಗ್ಗೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ಆದರೇ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತವಾದಂತ ಚರ್ಚೆಯೊಂದಿಗೆ ತೀರ್ಮಾನಿಸಲಾಗುತ್ತದೆ ಎಂದರು.
ಸೆ.15ರಂದು ವಿಶ್ವ ಪ್ರಜಾಪ್ರಭುತ್ವ ದಿನ: ಸಮಸ್ತ ಕನ್ನಡಿಗರಿಗೆ ಈ ಕರೆ ಕೊಟ್ಟ ಸಿಎಂ ಸಿದ್ಧರಾಮಯ್ಯ
ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬದ ಪ್ರಯುಕ್ತ 22 ವಿಶೇಷ ರೈಲು ಸಂಚಾರ | Special Train
ಕೇರಳದ ‘ಹೇಮಾ’ ಸಮಿತಿ ಮಾದರಿ ಸಮಿತಿ ರಚಿಸಿ : ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಮಾಡಿದ ‘ಫೈರ್’