ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಇಂದು ಎಸ್ಐಟಿ ಅಧಿಕಾರಿಗಳಿಂದ ಬಿಜೆಪಿ, ಜೆಡಿಎಸ್ ಮುಖಂಡರಿಗೆ ಬಿಗ್ ಶಾಕ್ ನೀಡಲಾಗಿದೆ. ಹಾಸನದಲ್ಲಿ ಪ್ರೀತಂ ಗೌಡ ಆಪ್ತರ ಬಾರ್, ಹೋಟೆಲ್ ಮೇಲೆ ದಾಳಿ ನಡೆಸಿದ್ರೇ, ವಕೀಲ ದೇವರಾಜೇಗೌಡ ಅವರ ನಿವಾಸದ ಮೇಲೂ ದಾಳಿ ನಡೆಸಿ, ಶಾಕ್ ಮೇಲೆ ಶಾಕ್ ನೀಡಿದ್ದಾರೆ.
ಹಾಸನದ ರವೀಂದ್ರನಗರದಲ್ಲಿರುವಂತ ವಕೀಲ ದೇವರಾಜೇಗೌಡ ಅವರ ನಿವಾಸದ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾಸನದ ರವೀಂದ್ರನಗರದಲ್ಲಿರುವಂತ ವಕೀಲ ದೇವರಾಜೇಗೌಡ ಅವರ ನಿವಾಸದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
ಅಂದಹಾಗೇ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಮೊದಲು ಟ್ವಿಸ್ಟ್ ಸಿಕ್ಕಿದೇ ವಕೀಲ ದೇವರಾಜೇಗೌಡ ಅವರಿಂದ ಆಗಿದೆ. ನನ್ನ ಬಳಿ ಇದ್ದಂತ ಪೆನ್ ಡ್ರೈವ್ ಅನ್ನು ವಕೀಲ ದೇವರಾಜೇಗೌಡ ಅವರಿಗೆ ನೀಡಲಾಗಿತ್ತು ಎಂಬುದಾಗಿ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಹೇಳಿದ್ದರು.
ಈ ಪ್ರಕರಣದ ನಂತ್ರ ವಕೀಲ ದೇವರಾಜೇಗೌಡ ಅವರ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ನೀಡಿದಂತ ಆರೋಪದಲ್ಲಿ ದೂರು ನೀಡಿದ್ದರು. ಈ ದೂರು ಸಂಬಂಧ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಈಗ ನ್ಯಾಯಾಂಗ ಬಂಧನದಲ್ಲಿ ಅವರಿದ್ದಾರೆ.
ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್, ಬಾರ್ ಗಳ ಮೇಲೆ ‘SIT’ ದಾಳಿ
ಹಾಸನ ಸಂಸದ ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಜೆಪಿಯ ಮಾಜಿ ಶಾಸಕ ಪ್ರೀತಮ್ ಗೌಡ ಆಪ್ತರನ್ನು ಎಸ್ಐಟಿ ಬಂಧಿಸಿದ್ದು, ಇದೀಗ ಎಸ್ಐಟಿ ಪ್ರೀತಮ್ ಗೌಡ ಆಪ್ತರ ಹೋಟೆಲ್ ಹಾಗೂ ಬಾರ್ ಗಳ ಮೇಲೆ ಎಸ್ಐಟಿ ದಾಳಿ ಮಾಡಿದೆ.
ಹೌದು ಪ್ರಜ್ವಲ್ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಎರಡು ಕಡೆಗಳಲ್ಲಿ ಸಾಕ್ಷಿ ಸಿಗಬಹುದಾ ಎನ್ನುವ ಉದ್ದೇಶದಿಂದ ಎಸ್ಐಟಿ ಅಧಿಕಾರಿಗಳು ಇದೀಗ ಪ್ರೀತಮ್ ಗೌಡ ಆಪ್ತರ ಹೋಟೆಲ್ ಹಾಗೂ ಬಾರ್ ಗಳ ಮೇಲೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ.
ಪ್ರೀತಮ್ ಗೌಡ ಆಪ್ತರ ಹೋಟೆಲ್ ಹಾಗೂ ಬಾರ್ ಗಳ ಮೇಲೆ ಎಸ್ಐಟಿ ದಾಳಿ ನಡೆಸಿದೆ. ಹಾಸನದ ಎರಡು ಕಡೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶರತ್ ಒಡೆತನದ ಕ್ವಾಲಿಟಿ ಬಾರ್ ಹಾಗೂ ಕಿರಣ್ ಒಡೆತನದ ಹೋಟೆಲ್ ಹಾಗೂ ಬಾರ್ ಮೇಲೆ ಎಸ್ಐಟಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲೊಂದು ‘ಅಮಾನವೀಯ’ ಘಟನೆ: ಸಾಲ ತೀರಿಸಲು ಗಂಡು ಮಗುವನ್ನೇ ಮಾರಿದ ‘ಪಾಪಿ ತಂದೆ’
ವಿಜಯಪುರ : ಮೂರು ಮಕ್ಕಳ ಸಾವಿನ ಪ್ರಕರಣ : ಪಾಲಿಕೆ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ‘FIR’ ದಾಖಲು