ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿಯನ್ನು ರಾಜ್ಯಪಾಲರು ನೀಡಿದ್ದರು. ಮುಡಾ ಕುರಿತಂತೆ ಸಚಿವ ಜಮೀರ್ ಅಹ್ಮದ್ ಖಾನ್ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೂಚಿಸಿದ್ದಾರೆ. ಈ ಮೂಲಕ ಸಚಿವ ಜಮೀರ್ ಅಹ್ಮದ್ ಗೆ ಬಿಗ್ ಶಾಕ್ ನೀಡಲಾಗಿದೆ.
ಸಚಿವ ಜಮೀರ್ ಅಹ್ಮದ್ ಅವರು ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಟಿ.ಜೆ ಅಬ್ರಾಹಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಮುಡಾ ಹಗರಣ ಸಂಬಂಧ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದು ಆಕ್ಷೇಪಾರ್ಹವಾಗಿದೆ ಎಂಬುದಾಗಿ ತಿಳಿಸಿದ್ದರು.
ಈ ದೂರಿನ ಹಿನ್ನಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು,ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಅವರಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ಹೀಗಾಗಿ ಸಚಿವ ಜಮೀರ್ ಅಹ್ಮದ್ ಗೆ ಸಂಕಷ್ಟ ಎದುರಾದಂತೆ ಆಗಿದೆ.
BREAKING : ಶೀಘ್ರದಲ್ಲೇ ‘DL, RC’ ಗೂ ಕ್ಯೂಆರ್ ಕೋಡ್ : ‘ಇ’ ಆಡಳಿತ ಕ್ರಮಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ