ಚಿತ್ರದುರ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ, ನ್ಯಾಯಾಂಗ ಬಂಧನದಲ್ಲಿರುವಂತ ಮುರುಘಾ ಶ್ರೀಗಳು ( Murugha Sri ), ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದ್ದು, ಮುರುಘಾ ಶ್ರೀಗಳಿಗೆ ಬಿಗ್ ಶಾಕ್ ನೀಡಿದಂತೆ ಆಗಿದೆ.

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ ಸಂಬಂಧ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಮುರುಘಾ ಶ್ರೀಗಳನ್ನು ಪೊಲೀಸರು ಬಂಧಿಸಿದ್ದರು.

BIGG NEW : ಉಗಾಂಡದಲ್ಲಿ ಎಬೋಲಾ ವೈರಸ್ ಅಟ್ಟಹಾಸ : 7 ಮಂದಿಗೆ ಸೋಂಕು, ಓರ್ವ ರೋಗಿ ಸಾವು| Ebola virus outbreak in uganda

ಬಂಧನದ ಬಳಿಕ ನ್ಯಾಯಾಂಗ ಬಂಧನದಕ್ಕೆ ಕೋರ್ಟ್ ನೀಡಿತ್ತು. ಇದೀಗ ನ್ಯಾಯಾಂಗ ಬಂಧನದಲ್ಲಿರುವಂತ ಮುರುಘಾ ಶ್ರೀಗಳ ಪರ ವಕೀಲರು ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಸಿದ್ದರು.

ಈ ಹಿಂದೆ ಮುರುಘಾ ಶರಣರು ಸಲ್ಲಿಸಿದ್ದಂತ ಜಾಮೀನು ಅರ್ಜಿಗೆ ನ್ಯಾಯಾಪೀಠವು ಸರ್ಕಾರದ ಪರ ವಕೀಲರಿಗೆ ಆಕ್ಷೇಪಣೆಗಳಿದ್ದರೇ ಸಲ್ಲಿಸುವಂತೆ ಸೂಚಿಸಿ, ವಿಚಾರಣೆ ಇಂದಿಗೆ ಮುಂದೂಡಿತ್ತು. ಇಂದು ಮುರುಘಾ ಶ್ರೀಗಳ ಪರ ಸಲ್ಲಿಕೆ ಮಾಡಲಾಗಿದ್ದಂತ ಜಾಮೀನು ಅರ್ಜಿಯ ಸಂಬಂಧ ವಾದ-ಪ್ರತಿವಾದ ಆಲಿಸಿ, ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಹೀಗಾಗಿ ಮುರುಘಾ ಶ್ರೀಗಳಿಗೆ ಬಿಗ್ ಶಾಕ್ ನೀಡಿದಂತೆ ಆಗಿದೆ.

Share.
Exit mobile version