ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ 42ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ನಡುವೆ ಎಸ್‌ಐಟಿ ಸಿಬ್ಬಂದಿಗಳು ಕೆ.ಆರ್.ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಜಾಮೀನು ರದ್ದು ಕೋರಿ ಎಸ್ಐಟಿಯಿಂದ ಹೈಕೋರ್ಟ್ಗೆ ಅರ್ಜಿ ಸಾಧ್ಯತೆ ಇದೆ ಎನ್ನಲಾಗಿದೆ.
ಹೈಕೋರ್ಟ್ನಲ್ಲಿ ಸರ್ಕಾರದ ಪರ ವಾದಿಸಲು ವಿಶೇಷ ಪಬ್ಲಿಕ್ ಪ್ರಾಸೆಕ್ಯೂಟರ್ ಆಗಿ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ನೇಮಿಸಿ ಸರ್ಕಾರ ಆದೇಶ ಹೊರಡಿಸಿದ್ದು ಕೇಸಿಗೆ ಸಂಬಂಧಪಟ್ಟಂತೆ ಕೂತುಹಲ ಇನ್ನೂ ಹೆಚ್ಚಾಗುತ್ತಿದೆ. ಕಿಡ್ನಾಪ್ ಪ್ರಕರಣದಲ್ಲಿ ಜಾಮೀನು ಪಡೆದು ಹೊರ ಬಂದಿದ್ದ ರೇವಣ್ಣಗೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಕೇಸ್ ಸಂಕಷ್ಟ ತಂದೊಡ್ಡಿದೆ.