ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡುತ್ತಿದ್ದು, ಬಗರ್ ಹುಕುಂ ಅಡಿಯಲ್ಲಿ ಮಂಜೂರಾತಿಗೆ ಅರ್ಜಿ ಸಲ್ಲಿಸಿದವರಿಗೆ ಶೀಘ್ರವೇ ಮಂಜೂರಾತಿ ಪತ್ರ ದೊರೆಯಲಿದೆ. ಇದರ ಜೊತೆಗೆ ಜೊತೆಗೆ ಅಕ್ರಮವಾಗಿ ಬಗರ್ ಹುಕುಂ ಜಮೀನು ಮಂಜೂರಾತಿ ಪಡೆದವರಿಗೂ ಸರ್ಕಾರ ಬಿಗ್ ಶಾಕ್ ನೀಡಿದೆ. ಅದೇ ಅಕ್ರಮವಾಗಿ ಜಮೀನು ಮಂಜೂರು ಮಾಡಿಸಿಕೊಂಡಿದ್ರೆ ಖಾತೆಯಾಗಲ್ವಂತೆ.
ಈ ಬಗ್ಗೆ ವಿಧಾನಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿರುವಂತ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು, ಬಗರ್‌ಹುಕುಂ ಅಡಿಯಲ್ಲಿ ಮಂಜೂರಾದ ಜಮೀನುಗಳಿಗೆ ಖಾತೆ ಮಾಡಿಕೊಡಲು ಅಧಿಕಾರಿಗಳು ಲಂಚ ಕೇಳುತ್ತಿರುವ ಬಗ್ಗೆ ದೂರು ಬಂದರೆ, ಕ್ರಮ ತೆಗೆದುಕೊಳ್ಳಲಾಗುವುದು. ಅಕ್ರಮವಾಗಿ ಮಂಜೂರಾದ ಪ್ರಕರಣಗಳಲ್ಲಿ ಖಾತೆ ಆಗುವುದಿಲ್ಲ. ಕ್ರಮಬದ್ಧವಾಗಿ ಇರುವ ಪ್ರಕರಣಗಳಲ್ಲಿ ಖಾತೆ ಮಾಡಿಕೊಡಲಾಗುತ್ತದೆ ಎಂದಿದ್ದಾರೆ.
ಶೀಘ್ರವೇ ಅದನ್ನು ಮುಗಿಸಲು ಕ್ರಮ ಕೈಗೊಳ್ಳಲಾಗುವುದು. ಆದರೇ ಅಕ್ರಮವಾಗಿ ಬಗರ್ ಹುಕುಂ ಅಡಿಯಲ್ಲಿ ಜಮೀನು ಮಂಜೂರಾತಿ ಪಡೆದವರಿಗೆ ಖಾತೆ ಮಾಡಿಕೊಡುವುದಿಲ್ಲ ಅಂತ ಹೇಳುವ ಮೂಲಕ ಬಿಗ್ ಶಾಕ್ ನೀಡಿದ್ದಾರೆ.
ಬಗರ್‌ಹುಕುಂ ಅಡಿಯಲ್ಲಿ ಮಂಜೂರಾದ ಜಮೀನುಗಳಿಗೆ ಖಾತೆ ಮಾಡಿಕೊಡಲು ಅಧಿಕಾರಿಗಳು ಲಂಚ ಕೇಳುತ್ತಿರುವ ಬಗ್ಗೆ ದೂರು ಬಂದರೆ, ಕ್ರಮ ತೆಗೆದುಕೊಳ್ಳಲಾಗುವುದು. ಅಕ್ರಮವಾಗಿ ಮಂಜೂರಾದ ಪ್ರಕರಣಗಳಲ್ಲಿ ಖಾತೆ ಆಗುವುದಿಲ್ಲ. ಕ್ರಮಬದ್ಧವಾಗಿ ಇರುವ ಪ್ರಕರಣಗಳಲ್ಲಿ ಖಾತೆ ಮಾಡಿಕೊಡಲಾಗುತ್ತದೆ. ಅದನ್ನು ಶೀಘ್ರವೇ ಮುಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು… pic.twitter.com/jE4msqK9kG
— DIPR Karnataka (@KarnatakaVarthe) March 20, 2025
ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ‘3 ಸ್ಥಳ’ ಫೈನಲ್!
BIG NEWS: ಸಚಿವ ರಾಜಣ್ಣ ಮಾತ್ರವಲ್ಲ ಪುತ್ರ ಎಂಎಲ್ಸಿ ರಾಜೇಂದ್ರ ಮೇಲೂ ‘ಹನಿಟ್ರ್ಯಾಪ್’