ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ ಎನ್ನುವಂತೆ, ಸದ್ಯಕ್ಕೆ ಹೊಸದಾಗಿ ಪಡಿತರ ಚೀಟಿ ವಿತರಣೆ ಮಾಡುವುದಿಲ್ಲ ಅಂತ ತಿಳಿಸಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಆಹಾರ ಇಲಾಖೆ ಸಚಿವ ಕೆಹೆಚ್ ಮುನಿಯಪ್ಪ ಅವರು, ರಾಜ್ಯದಲ್ಲಿ ಕೇಂದ್ರ ನಿಗದಿ ಪಡಿಸಿದಂತ ಕಾರ್ಡ್ ಗುರಿ ಮುಕ್ತಾಯಗೊಂಡಿದೆ. ಹೀಗಾಗಿ ಹೊಸ ಕಾರ್ಡ್ ವಿತರಣೆ ಮಾಡುವುದಿಲ್ಲ ಎಂದರು.
ಈಗಾಗಲೇ ಅನರ್ಹರು ಬಿಪಿಎಲ್ ರೇಷನ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಆ ಕಾರ್ಡ್ ಗಳನ್ನು ರದ್ದುಪಡಿಸಿದ ನಂತ್ರ ಹೊಸದಾಗಿ ಅರ್ಜಿ ಸಲ್ಲಿಸಿರುವಂತ ಅರ್ಹರಿಗೆ ಬಿಪಿಎಲ್ ಕಾರ್ಡ್ ವಿತರಣೆ ಆರಂಭಿಸಲಾಗುತ್ತದೆ ಎಂದರು.
ಕೇಂದ್ರ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ಅನ್ವಯ 4,01,93,000 ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಣೆ ಮಾಡಲು ಗುರಿ ನಿಗದಿ ಮಾಡಲಾಗಿದೆ. ಆದರೆ ರಾಜ್ಯದಲ್ಲಿ ನಿಯಮ ಮೀರಿ 4,50,59,460 ಫಲಾನುಭವಿಗಳಿಗೆ ಪಡಿತರ ಕೊಡಲಾಗುತ್ತಿದೆ. ಕಾಯ್ದೆ ಪ್ರಕಾರ ನಿಗದಿ ಮಾಡಿರುವ ಫಲಾನುಭವಿಗಳಿಗೆ ಪಡಿತರ ಈಗಾಗಲೇ ಕೊಡಲಾಗುತ್ತಿದೆ.
ರಾಜ್ಯಾದ್ಯಂತ ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪದ ಟಿಕೆಟ್ ದರ ಜಾರಿಗೆ ಚಿಂತನೆ: ಗೃಹಸಚಿವ ಡಾ.ಜಿ.ಪರಮೇಶ್ವರ್
ರಾಜ್ಯದಲ್ಲಿ ಗಲಭೆ ಸೃಷ್ಟಿಸಿದರೇ ಸ್ವಯಂಪ್ರೇರಿತ ಕೇಸ್ ದಾಖಲು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ