ಬೆಂಗಳೂರು : ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ನಿರೀಕ್ಷೆಯಲ್ಲಿ ಇದ್ದವರಿಗೆ ಹೈಕೋರ್ಟ್ ಶಾಕ್ ನೀಡಿದ್ದು, ಚುನಾವಣೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಒಂದು ತಿಂಗಳು ಹೈಕೋರ್ಟ್ ಮುಂದೂಡಿದೆ.
ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರ ನೇತೃತ್ವದ ವಿಭಾಗೀಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಸಿದ್ದು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ: ಒಂದು ತಿಂಗಳು ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ರಾಜ್ಯ ಚುನಾವಣಾ ಆಯೋಗವು ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶ ಪಾಲಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ 2023ರಲ್ಲಿ ಈ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯ್ನು ಒಂದು ತಿಂಗಳು ಮುಂದೂಡಿದೆ. ಈ ಮೂಲಕ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮತ್ತೆ ನಿರಾಸೆಯಾಗಿದೆ.