Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಮಲಿಂಗಾರೆಡ್ಡಿ ನಮ್ಮ ಸ್ನೇಹಿತರು, ಎಲ್ಲಾ ಸಮಸ್ಯೆ ಕ್ಲಿಯರ್: ಅವರ ರಾಜೀನಾಮೆ ಅಂಗಿಕರಿಸುವುದಿಲ್ಲ; ಸಿಎಂ ಡಿ.ಕೆ.ಶಿವಕುಮಾರ್

ಮಾಜಿ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಕೃತಜ್ಞತೆ ಸಲ್ಲಿಸಿದ ವಿವಿಧ ವಿಭಾಗದ ಅರಣ್ಯ ಸಿಬ್ಬಂದಿ

ಅಡಿಕೆ ಬೆಳೆಗಾರರ ಬದುಕಿಗೆ ಹೆಚ್.ಎಸ್.ಮಂಜಪ್ಪ ಅವರು ‘ರಕ್ಷಾ ಕವಚ’: ಶಾಸಕ ಅರಗ ಜ್ಞಾನೇಂದ್ರ ಶ್ಲಾಘನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಾವಣಗೆರೆ ಉಪ ಚುನಾವಣೆಗೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ಟಿಕೆಟ್ ಘೋಷಣೆ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ
KARNATAKA

ದಾವಣಗೆರೆ ಉಪ ಚುನಾವಣೆಗೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ಟಿಕೆಟ್ ಘೋಷಣೆ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ

By ವಸಂತ ಬಿ ಈಶ್ವರಗೆರೆ

ದಾವಣಗೆರೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪಚುನಾವಣೆ ಘೋಷಣೆಯಾಗಿದ್ದು, ದಾವಣಗೆರೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಷ್ಠ ಮಟ್ಟಕ್ಕೆ ತಲುಪಿವೆ. ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲದ ನಡುವೆಯೇ, ಶಾಮನೂರು ಕುಟುಂಬದ ಕುಡಿ ಸಮರ್ಥ್ ಶಾಮನೂರು ಅವರು ಇಂದು (ಮಾರ್ಚ್ 20) ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಇನ್ನೂ ಅಭ್ಯರ್ಥಿಯ ಹೆಸರನ್ನು ಅಧಿಕೃತವಾಗಿ ಪ್ರಕಟಿಸದಿದ್ದರೂ, ಸಮರ್ಥ್ ಶಾಮನೂರು ಅವರು ಪಕ್ಷೇತರ ಮತ್ತು ಕಾಂಗ್ರೆಸ್ ಅಭ್ಯರ್ಥಿ ಎಂಬ ಎರಡು ಸೆಟ್ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ತಮ್ಮ ತಾಯಿ ಹಾಗೂ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಜೊತೆಗೂಡಿ ಚುನಾವಣಾಧಿಕಾರಿಗಳಿಗೆ ಪತ್ರ ಸಲ್ಲಿಸಿರುವ ಅವರು, ಮುಂಬರುವ ಸೋಮವಾರ ಮತ್ತೆ ಮೂರನೇ ಸೆಟ್ ನಾಮಪತ್ರ ಸಲ್ಲಿಸುವುದಾಗಿ ಘೋಷಿಸಿದ್ದಾರೆ. ಈ ನಡೆ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಶಾಮನೂರು ಕುಟುಂಬಕ್ಕೇ ಲಭಿಸಲಿದೆ ಎಂಬ ಆತ್ಮವಿಶ್ವಾಸವನ್ನು ಎತ್ತಿ ತೋರಿಸುತ್ತಿದೆ. ಇದೇ ಸಂದರ್ಭದಲ್ಲಿ ಮಾತನಾಡಿದ ಡಾ. ಪ್ರಭಾ ಮಲ್ಲಿಕಾರ್ಜುನ ಅವರು, ಯುಗಾದಿ ಹಬ್ಬದ ಈ ಸುಸಂದರ್ಭದಲ್ಲಿ ಹೊಸ ಚಿಗುರು ಬರಲಿದೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಆದರೆ, ಕಾಂಗ್ರೆಸ್ ಪಾಳಯದಲ್ಲಿ ಟಿಕೆಟ್‌ಗಾಗಿ ಭಾರೀ ಜಟಾಪಟಿ ನಡೆಯುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಮತ್ತೋರ್ವ ಪ್ರಬಲ ಆಕಾಂಕ್ಷಿ ಸಾದಿಕ್ ಪೈಲ್ವಾನ್ ಕೂಡಾ ನಾಮಪತ್ರ ಸಲ್ಲಿಸಿರುವುದು ಪಕ್ಷದೊಳಗಿನ ಆಂತರಿಕ ಭಿನ್ನಮತವನ್ನು ಬೀದಿಗೆ ತಂದಿದೆ. ಇತ್ತೀಚೆಗೆ ನಡೆದ ಕಾಂಗ್ರೆಸ್ ಸಭೆಯಲ್ಲಿ ಶಾಮನೂರು ಕುಟುಂಬದ ವಿರುದ್ಧ ಅಲ್ಪಸಂಖ್ಯಾತ ಮತ್ತು ಅಹಿಂದ ವರ್ಗದ ನಾಯಕರು ತೀವ್ರ ಒತ್ತಡ ಹೇರಿದ್ದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದ ಶಾಮನೂರು ಶಿವಶಂಕರಪ್ಪ ಅವರ ಕೊಡುಗೆಯನ್ನು ಮುಂದಿಟ್ಟುಕೊಂಡು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸಲು ಹಠಕ್ಕೆ ಬಿದ್ದಿದ್ದಾರೆ.

ಮತ್ತೊಂದೆಡೆ ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ದಾವಣಗೆರೆ ದಕ್ಷಿಣದಲ್ಲಿ ಶ್ರೀನಿವಾಸ ಟಿ. ದಾಸಕರಿಯಪ್ಪ ಹಾಗೂ ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ಅವರಿಗೆ ಟಿಕೆಟ್ ನೀಡಿದೆ. ಆದರೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅಭ್ಯರ್ಥಿಗಳ ಬದಲಾವಣೆಯಾಗುವ ಸಾಧ್ಯತೆಯಿದೆ ಎಂದು ಹೇಳಿಕೆ ನೀಡಿರುವುದು ಸಂಚಲನ ಮೂಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಇಂದು ಅಥವಾ ನಾಳೆ ಕಾಂಗ್ರೆಸ್ ತನ್ನ ಅಧಿಕೃತ ಅಭ್ಯರ್ಥಿಯ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ.

ಮಾರ್ಚ್.21ರಂದು ಈದ್‌ ಪ್ರಾರ್ಥನೆ ಹಿನ್ನಲೆ: ಬೆಂಗಳೂರು ನಗರದಲ್ಲಿ ಈ ಸಂಚಾರ ಬದಲಾವಣೆ

BREAKING : ಉಪಚುನಾವಣೆ ಕಾವು : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ತಾಯಿಯೊಂದಿಗೆ ಬಂದು ನಾಮಪತ್ರ ಸಲ್ಲಿಸಿದ ಸಮರ್ಥ

Share. Facebook Twitter LinkedIn WhatsApp Email

Related Posts

ರಾಮಲಿಂಗಾರೆಡ್ಡಿ ನಮ್ಮ ಸ್ನೇಹಿತರು, ಎಲ್ಲಾ ಸಮಸ್ಯೆ ಕ್ಲಿಯರ್: ಅವರ ರಾಜೀನಾಮೆ ಅಂಗಿಕರಿಸುವುದಿಲ್ಲ; ಸಿಎಂ ಡಿ.ಕೆ.ಶಿವಕುಮಾರ್

2 Mins Read

ಮಾಜಿ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಕೃತಜ್ಞತೆ ಸಲ್ಲಿಸಿದ ವಿವಿಧ ವಿಭಾಗದ ಅರಣ್ಯ ಸಿಬ್ಬಂದಿ

2 Mins Read

ಅಡಿಕೆ ಬೆಳೆಗಾರರ ಬದುಕಿಗೆ ಹೆಚ್.ಎಸ್.ಮಂಜಪ್ಪ ಅವರು ‘ರಕ್ಷಾ ಕವಚ’: ಶಾಸಕ ಅರಗ ಜ್ಞಾನೇಂದ್ರ ಶ್ಲಾಘನೆ

9 Mins Read
Recent News

ರಾಮಲಿಂಗಾರೆಡ್ಡಿ ನಮ್ಮ ಸ್ನೇಹಿತರು, ಎಲ್ಲಾ ಸಮಸ್ಯೆ ಕ್ಲಿಯರ್: ಅವರ ರಾಜೀನಾಮೆ ಅಂಗಿಕರಿಸುವುದಿಲ್ಲ; ಸಿಎಂ ಡಿ.ಕೆ.ಶಿವಕುಮಾರ್

ಮಾಜಿ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಕೃತಜ್ಞತೆ ಸಲ್ಲಿಸಿದ ವಿವಿಧ ವಿಭಾಗದ ಅರಣ್ಯ ಸಿಬ್ಬಂದಿ

ಅಡಿಕೆ ಬೆಳೆಗಾರರ ಬದುಕಿಗೆ ಹೆಚ್.ಎಸ್.ಮಂಜಪ್ಪ ಅವರು ‘ರಕ್ಷಾ ಕವಚ’: ಶಾಸಕ ಅರಗ ಜ್ಞಾನೇಂದ್ರ ಶ್ಲಾಘನೆ

BIG NEWS : ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕಾರ ಮಾಡಲ್ಲ : ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

State News
KARNATAKA

ರಾಮಲಿಂಗಾರೆಡ್ಡಿ ನಮ್ಮ ಸ್ನೇಹಿತರು, ಎಲ್ಲಾ ಸಮಸ್ಯೆ ಕ್ಲಿಯರ್: ಅವರ ರಾಜೀನಾಮೆ ಅಂಗಿಕರಿಸುವುದಿಲ್ಲ; ಸಿಎಂ ಡಿ.ಕೆ.ಶಿವಕುಮಾರ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು : “ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜಿನಾಮೆ…

ಮಾಜಿ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಕೃತಜ್ಞತೆ ಸಲ್ಲಿಸಿದ ವಿವಿಧ ವಿಭಾಗದ ಅರಣ್ಯ ಸಿಬ್ಬಂದಿ

ಅಡಿಕೆ ಬೆಳೆಗಾರರ ಬದುಕಿಗೆ ಹೆಚ್.ಎಸ್.ಮಂಜಪ್ಪ ಅವರು ‘ರಕ್ಷಾ ಕವಚ’: ಶಾಸಕ ಅರಗ ಜ್ಞಾನೇಂದ್ರ ಶ್ಲಾಘನೆ

BIG NEWS : ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕಾರ ಮಾಡಲ್ಲ : ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.