ಮೈಸೂರು: ನಗರಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆ ರಂಗೇರಿದೆ. ಮೈಸೂರು ಮೇಯರ್ ಹುದ್ದೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿ ಮತ್ತು ಜೆಡಿಎಸ್ ಜೊತೆ ಮೈತ್ರಿ ಸಾಧ್ಯತೆ ಇದೆ. ಬಿಜೆಪಿಗೆ ಮೇಯರ್ ಸ್ಥಾನ ಆದರೆ, ಜೆಡಿಎಸ್ ಗೆ ಉಪಮೇಯರ್ ಸ್ಥಾನ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಜೆಡಿಎಸ್ ಉಪಮೇಯರ್ ಬೆಂಬಲ ನೀಡಲು ಕಾಂಗ್ರೆಸ್ ಮುಂದಾಗಿದ್ದಾರೆ. ಕೊನೆ ಕ್ಷಣದಲ್ಲಿ ಮೈತ್ರಿಗೆ ಬಿಜೆಪಿ ಮುಂದಾಗಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ , ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಿಂದ ಮೇಯರ್ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಮೇಯರ್ ಸ್ಥಾನಕ್ಕೆ ಸಯ್ಯದ್ ಅಸ್ರತ್ ಉಲ್ಲಾ ಹಾಗೂ ಗೋಪಿ, ಜೆಡಿಎಸ್ನಿಂದ ಕೆ.ವಿ.ಶ್ರೀಧರ್, ಬಿಜೆಪಿಯಿಂದ ಶಿವಕುಮಾರ್ ನಾಮಪತ್ರ ಸಲ್ಲಿಸಿದರು.