ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಸಂತ್ರಸ್ತ ಮಹಿಳೆ ನೀಡಿದಂತ ದೂರಿನ ಹಿನ್ನಲೆಯಲ್ಲಿ, ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಪ್ರಜ್ವಲ್ ಬಳಿಕ ತಂದೆ ಹೆಚ್.ಡಿ ರೇವಣ್ಣ ಅವರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಿ ಆದೇಶಿಸಿದೆ. ಈ ನಡುವೆ ತನಗೆ ಜೀವ ಬೆದರಿಕೆ ಹಾಕಿ ಲೈಂಗಿಕವಾಗಿ ಶೋಷಿಸಿದ್ದಾರೆ ಎಂದು ಆರೋಪಿಸಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಂತ್ರಸ್ತೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ಐಆರ್ ದಾಖಲಾಗಿದೆ.
ಸಂತ್ರಸ್ತೆಯು ಶನಿವಾರ ಮಧ್ಯಾಹ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಂತ್ರಸ್ತೆಯ ದೂರು ಆಧರಿಸಿ ಸೂಕ್ತ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಶಿಫಾರಸು ಮಾಡಿದ್ದರು.
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್‌ನಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಕುರಿತು ತಿಳಿಸಿರುತ್ತಾರೆ. ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ. ಕೆಲವರ ಮೇಲೆ ಅತ್ಯಾಚಾರ ಸಹ ಮಾಡುತ್ತಿರುವ ತುಣುಕುಗಳಿರುವ ಪೆನ್‌ಡ್ರೈವ್‌ಗಳು ಈಗ ಜನ ಸಾಮಾನ್ಯರ ಕೈಗೆ ಸಿಕ್ಕಿ, ಇಡೀ ಸಮಾಜ ತಲೆ ತಗ್ಗಿಸುವ ಸ್ಥಿತಿ ಏರ್ಪಟ್ಟಿದ್ದು, ಮಹಿಳೆಯರ ಬದುಕು ಹಾಗೂ ಘನತೆಯನ್ನು ನಾಶ ಮಾಡುತ್ತಿರುವುದಾಗಿ, ಈ ಕೃಷ್ಣಕ್ಕೆ ಕಾರಣರಾಗಿರುವವರ ವಿರುದ್ಧ ಸೂಕ್ತ ಪೊಲೀಸ್ ತನಿಖೆಯನ್ನು ನಡೆಸುವಂತೆ ಆಯೋಗದಲ್ಲಿ ಸಲ್ಲಿಸಿರುವ ಮನವಿಯಲ್ಲಿ ಕೋರಿದ್ದರು.
ಹಾಸನ ಜಿಲ್ಲೆಯಲ್ಲಿ ಪೆನ್ ಡ್ರೈವ್ ಸುದ್ದಿಯು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಹಲವು ಪತ್ರಿಕಾ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ಹಲವು ಮಹಿಳೆಯರನ್ನು ಬಲವಂತದಿಂದ ಲೈಂಗಿಕ ಕ್ರಿಯೆಗೆ ಒತ್ತಾಯಪಡಿಸುವ ಮೂಲಕ ಚಿತ್ರೀಕರಿಸಲಾಗಿದೆ ಎನ್ನಲಾಗುತ್ತಿದ್ದು, ಚಿತ್ರೀಕರಣ ಮಾಡಿದ ವ್ಯಕ್ತಿ ಮತ್ತು ಅದನ್ನು ಸಾರ್ವಜನಿಕಗೊಳಿಸಿದ ವ್ಯಕ್ತಿಯನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಮಾನಹಾನಿ ಉಂಟು ಮಾಡಿದವರನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಬೇಕು ಮತ್ತು ಮಹಿಳೆಯರ ಮೇಲೆ ನೀಚ ಕೃತ್ಯವೆಸಗಿರುವವರ ವಿರುದ್ಧ ಸೂಕ್ತ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.
ಈ ಬೆನ್ನಲ್ಲೇ ರಾಜ್ಯ ಸರ್ಕಾರ ಅಧಿಕೃತವಾಗಿ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ವೀಡಿಯೋ ಪ್ರಕರಣವನ್ನು ಸಿಐಡಿಯ ಎಸ್ಐಟಿ ತನಿಖೆಗೆ ವಹಿಸಿ ಅಧಿಕೃತ ಆದೇಶ ಹೊರಡಿಸಲಾಗಿತ್ತು.
ಈ ನಡುವೆ ಸಂತ್ರಸ್ತ ಮಹಿಳೆಯ ದೂರಿನ ಹಿನ್ನಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನದ ಹೊಳೇನರಸೀಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 354ಎ, 354ಡಿ, 506, 509ರಡಿಯಲ್ಲಿ ಕ್ರಿಮಿನಲ್ ಕೇಸ್ ದಾಖಲಾಗಿದೆ.
ಇದೀಗ ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯಿಂದ ದೂರು ನೀಡಿದ್ದಾರೆ. ಭವಾನಿ ರೇವಣ್ಣ ಇಲ್ಲದ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಆ ದೂರಿನ ಹಿನ್ನಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧವೂ ಪುತ್ರನ ಬೆನ್ನಲ್ಲೇ ಎಫ್ಐಆರ್ ದಾಖಲಾಗಿದೆ.
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವತಿ ಸಜೀವದಹನ ಕೇಸ್: ಮೃತರ ಸಂಖ್ಯೆ 4ಕ್ಕೆ ಏರಿಕೆ
ಕಾಂಗ್ರೆಸ್ ರಾಜಕುಮಾರ ನಮ್ಮ ಮಹಾರಾಜರನ್ನ ಅವಮಾನಿಸ್ತಾರೆ, ನವಾಬರ ದೌರ್ಜನ್ಯ ಮರೆತು ಬಿಡ್ತಾರೆ : ಪ್ರಧಾನಿ ಮೋದಿ