ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಕೇಸ್ ಗೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಆರೋಪಿ ಸಮೀರ್ ನೀಚ ಕೃತ್ಯ ಇದೀಗ ಬಯಲಾಗಿದೆ. ಸಮೀರ್ ಮುಲ್ಲಾ ಮೊಬೈಲ್ ನಲ್ಲಿ ಹಿಂದೂ ಯುವತಿಯರ ಫೋಟೋಗಳು, ಗರ್ಭ ನಿರೋಧಕ ಮಾತ್ರೆಗಳ ಫೋಟೋ, ಸ್ಕಾನಿಂಗ್ ರಿಪೋರ್ಟ್ ಕೂಡ ಪತ್ತೆಯಾಗಿದೆ.
ಹುಬ್ಬಳ್ಳಿ ನಗರದ ವಿಜಯನಗರ ನಿವಾಸಿಯಾಗಿರುವ ಸಮೀರ್ ಮತ್ತು ಹಿಂದೂ ಯುವತಿ ಜಿಮ್ನಲ್ಲಿ ಪರಿಚಯವಾಗಿತ್ತು. ಬಳಿಕ ಸಮೀರ್ ಯುವತಿಯೊಂದಿಗೆ ಸಲುಗೆ ಬೆಳೆಸಿದ್ದಾನೆ. ಬಳಿಕ ಯುವತಿಯನ್ನು ಮನೆಗೆ ಕರೆಯಿಸಿಕೊಂಡು ಜ್ಯೂಸ್ನಲ್ಲಿ ಮತ್ತು ಬರುವ ಔಷಧಿ ಬೆರೆಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ಸಮೀರ್ ಕುಟುಂಬದವರು ವಿಕಾಸನಗರದಲ್ಲಿರುವ ಯುವತಿಯ ಮನೆಗೆ ನುಗ್ಗಿ ಗಲಾಟೆ ನಡೆಸಿದರೆಂಬ ಆರೋಪ ಕೇಳಿಬಂದಿದೆ.
ಕೆಲ ದಿನ ನಂತರ ಯುವತಿ ಜೊತೆ ಖಾಸಗಿಯಾಗಿ ಕಳೆದ ಕ್ಷಣಗಳಿದ್ದ ವಿಡಿಯೋ ತೋರಿಸಿ ಬೆದರಿಕೆ ಹಾಕಿದ್ದು, ಅನೇಕ ಬಾರಿ ಲೈಂಗಿಕ ಕಿರುಕುಳ ನೀಡಿದ್ದಾನಂತೆ. ಆದರೂ ಇದೆಲ್ಲವನ್ನು ಯುವತಿ ಮನೆಯವರಿಗೆ ಹೇಳಿರಲಿಲ್ಲ. ಆದ್ರೆ ನಿನ್ನೆ (ಏಪ್ರಿಲ್ 02) ಸಂಜೆ ಈ ವಿಚಾರ ಯುವತಿ ಮನೆಯವರು ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರಿಗೆ ಗೊತ್ತಾಗಿದ್ದು, ಬಳಿಕ ದೊಡ್ಡ ಹೈಡ್ರಾಮಾವೇ ನಡೆದಿದೆ. ವಿಚಾರ ತಿಳಿಯುತ್ತಿದ್ದಂತೆಯೇ ಹಿಂದೂ ಕಾರ್ಯಕರ್ತರು, ಹೋಗಿ ಸಮೀರ್ ನನ್ನು ಥಳಿಸಿ ಬಳಿಕಪೊಲೀಸರ ವಶಕ್ಕೊಪ್ಪಿಸಿದ್ದಾರೆ. ಇದಾದ ಬಳಿಕ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ.
ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಸಮೀರ್ ಮುಲ್ಲಾ ಮನೆಗೆ ಹೋಗಿ ಆತನನ್ನು ಹಿಡಿದುಕೊಂಡು ಥಳಿಸಿ ಆತನನ್ನು ಹಳೆ ಹುಬ್ಬಳ್ಳಿ ಠಾಣೆಗೆ ಒಪ್ಪಿಸಿದ್ದರು. ಇತ್ತ ಸಮೀರ್ ಮುಲ್ಲಾ ನನ್ನು ಯುವತಿ ಮನೆಯವರೇ ಅಪಹರಣ ಮಾಡಿಕೊಂಡು ಹೋಗಿದ್ದಾರೆ ಎಂದು ತಿಳಿದು ಸಮೀರ್ ಮುಲ್ಲಾ ಮನೆಯವರು ಯುವತಿ ಮನೆಗೆ ನುಗ್ಗಿ ಗಲಾಟೆ ಮಾಡಿ ಅನೇಕರ ಮೇಲೆ ಹಲ್ಲೆ ಮಾಡಿದ್ದರು. ಇತ್ತ ಪೊಲೀಸರು ಬರುತ್ತಿದ್ದಂತೆಯೇ ಅಲ್ಲಿಂದ ಕಾಲ್ಕಿತ್ತಿದ್ದರು. ಇನ್ನು ಇದಾದ ನಂತರ ಹಳೆ ಹುಬ್ಬಳ್ಳಿ ಠಾಣೆಗೆ ಮುತ್ತಿಗೆ ಹಾಕಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮತ್ತು ವಿವಿಧ ಸಮಾಜದವರು, ಪ್ರತಿಭಟನೆ ನಡೆಸಿದ್ದಾರೆ.








