ಮೈಸೂರು : ಚರ್ಚ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಮೈಸೂರಿನ ಪಿರಿಯಾಪಟ್ಟಣದಲ್ಲಿ ವರದಿಯಾಗಿತ್ತು. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇದೀಗ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಒಂದು ಸಿಕ್ಕಿದೆ. ವಿಚಾರಣೆ ವೇಳೆ ಆರೋಪಿ ಸಂಬಳ ನೀಡದಿದ್ದಕ್ಕೆ ಕಳ್ಳತನ ಮಾಡಲಾಗಿದೆ ಎಂದು ಬಾಯ್ಬಿಟ್ಟಿದ್ದಾನೆ.
ಈ ಬಗ್ಗೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹೇಳಿಕೆ ನೀಡಿದ್ದು, ವಿಶ್ವ ಎಂಬ ಪೌರ ಕಾರ್ಮಿಕನನ್ನ ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದೆ. ಎರಡು ತಿಂಗಳಿನಿಂದ ಚರ್ಚ್ನಲ್ಲಿ ಸಂಬಳ ಕೊಟ್ಟಿರಲಿಲ್ಲ. ಕ್ರಿಸ್ ಮಸ್ ಹಬ್ಬದ ವೇಳೆ ಫಾದರ್ ಜೊತೆ ಮಾತನಾಡಲು ಚರ್ಚ್ಗೆ ಬಂದಿದ್ದ. ಈ ವೇಳೆ ಫಾದರ್ ಭೇಟಿಯ ಅವಕಾಶ ಸಿಕ್ಕಿರಲಿಲ್ಲ. ಆದ್ದರಿಂದ ಹುಂಡಿ ಕಳ್ಳತನ ಮಾಡಲು ನಿರ್ಧಾರ ಮಾಡಿದ್ದನು, ಅಂದಾಜು 2 ರಿಂದ 3 ಸಾವಿರ ಹಣ ಕಳ್ಳತನ ಮಾಡಿದ್ದಾನೆ ಎಂದು ಹೇಳಿದ್ದಾರೆ.
ಕಾಣಿಕೆ ಹುಂಡಿ ಕಳ್ಳತನ ಮಾಡಿ ಬಾಲ ಏಸುವಿನ ಮೂರ್ತಿ, ತೊಟ್ಟಿಲು ಧ್ವಂಸ ಮಾಡಲಾಗಿತ್ತು. ಚರ್ಚ್ ಹೊರಗಿದ್ದ ಹುಂಡಿಯನ್ನು ಖದೀಮರು ಕದ್ದೊಯ್ಯಲಾಗಿತ್ತು. ಘಟನೆ ನಡೆದ ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದರು.
BIGG NEWS : ನಾಳೆ ವಿಜಯಪುರಕ್ಕೆ ಸಿಎಂ ಬೊಮ್ಮಾಯಿ ಭೇಟಿ : ‘ಸಿದ್ದೇಶ್ವರ ಶ್ರೀ’ ಆರೋಗ್ಯ ವಿಚಾರಣೆ ಸಾಧ್ಯತೆ
BREAKING NEWS: ‘ಸಾಂಬಶಿವ ಪ್ರಹಸನ’ ನಾಟಕ ತಿರುಚಿ ಪ್ರದರ್ಶನ: ‘ಸಾಹಿತಿ ಡಾ.ಚಂದ್ರಶೇಖರ ಕಂಬಾರ’ ಪೊಲೀಸರಿಗೆ ದೂರು