ಕೊಪ್ಪಳ: ಜಿಲ್ಲೆಯಲ್ಲಿ ಗವಿಸಿದ್ದಪ್ಪ ನಾಯಕ ಕೊಲೆಯಾಗಿತ್ತು. ಈ ಪ್ರಕರಣಕ್ಕೆ ಟ್ವಿಸ್ಟ್ ಎನ್ನುವಂತೆ ಕೊಲೆಯಾದ ಗವಿಸಿದ್ದಪ್ಪ ನಾಯಕ ವಿರುದ್ಧ ಕೊಪ್ಪಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.
ಗವಿಸಿದ್ದಪ್ಪ ಹತ್ಯೆಗೆ ಕಾರಣ ಎನ್ನಲಾದ ಬಾಲಕಿಯ ತಾಯಿ ಈ ಸಂಬಂಧ ಕೊಪ್ಪಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಪ್ರಾಪ್ತೆ ತಾಯಿಯಿಂದ ನೀಡಿದಂತ ದೂರಿನ ಹಿನ್ನಲೆಯಲ್ಲಿ ಕೊಲೆಯಾದ ಗವಿಸಿದ್ದಪ್ಪ ನಾಯಕ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.
ಕೊಲೆಯಾದಂತ ಗವಿಸಿದ್ದಪ್ಪ ನಾಯಕ ಸೇರಿದಂತೆ ನಾಲ್ವರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಹತ್ಯೆಯಾದ ಗವಿಸಿದ್ದಪ್ಪ ನಾಯಕ, ಗವಿಸಿದ್ದಪ್ಪ ತಂದೆ ನಿಂಗಜ್ಜ ನಾಯಕ, ತಾಯಿ ದೇವಮ್ಮ, ಸಹೋದರಿ ಅನ್ನಪೂರ್ಣ ವಿರುದ್ಧ ಕೊಪ್ಪಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.
ಆಗಸ್ಟ್.3ರಂದು ಕೊಪ್ಪಳದ ವಾರ್ಡ್ ನಂ.3ರಲ್ಲಿ ಗವಿಸಿದ್ದಪ್ಪ ನಾಯಕ ಹತ್ಯೆಯಾಗಿತ್ತು. ರಾಜಕೀಯ ಜಟಾಪಟಿಗೆ ಕಾರಣವಾಗಿದ್ದ ಗವಿಸಿದ್ದಪ್ಪ ಕೊಲೆ. ಈ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸುವಂತೆ ಬಿಜೆಪಿ ಆಗ್ರಹಿಸಿತ್ತು.
BREAKING: ಉಪರಾಷ್ಟ್ರಪತಿ ಚುನಾವಣೆಗೆ NDA ಅಭ್ಯರ್ಥಿಯಾಗಿ ಸಿ.ಪಿ.ರಾಧಾಕೃಷ್ಣನ್ ಹೆಸರು ಘೋಷಣೆ
ಪರಿಷ್ಕೃತ ಜಿಎಸ್‌ಟಿ ದರಗಳಿಂದ ಯಾವ ವಸ್ತುಗಳು ಅಗ್ಗವಾಗಬಹುದು? ಇಲ್ಲಿದೆ ಡೀಟೆಲ್ಸ್ | GST bonanza