ಬಳ್ಳಾರಿ: ವಿಮ್ಸ್ನಲ್ಲಿ ಸತ್ತವರು ನಾಲ್ವರಲ್ಲ, ಇಬ್ಬರು ಮಾತ್ರ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ ಅವರು ಮಾಹಿತಿ ನೀಡಿದ್ದಾರೆ. ವಿಮ್ಸ್ (VIMS) ದುರಂತ ನಡೆದ ಬಳಿಕ ಇಂದು ಆಸ್ಪತ್ರೆಗೆ ಭೇಟಿ ಘಟನೆ ಸಂಬಂಧ ಅಧಿಕಾರಿಗಳಿಗೆ ಮಾಹಿತಿ ಪಡೆದುಕೊಂಡ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು, ಇದೇ ವೇಳೆ ಅವರು ಮಾತನಾಡಿ, ಘಟನೆ ಸಂಬಂಧ ಸಂಪೂರ್ಣ ಮಾಹಿತಿಯನ್ನು ತನಿಖಾ ಸಮಿತಿ ಎಲ್ಲ ವಿಭಾಗಗಳಿಂದಲೂ ಮಾಹಿತಿ ಪಡೆದುಕೊಂಡಿದೆ. ರಾಜ್ಯದಲ್ಲಿ ವಿಮ್ಸ್ ಒಂದು ಅತ್ಯುತ್ತಮ ಸಂಸ್ಥೆ. ಇಲ್ಲಿ ಸತ್ತವರ ಸಂಖ್ಯೆ ಎರಡು ಮಾತ್ರ ಅಂತ ತಿಳಿಸಿದ ಅವರು. ಈ ಪ್ರಕರಣದ ಹಿಂದೆ ಯಾವುದೇ ಕಾಣದ ಕೈಗಳಿದ್ದರು ಕ್ರಮ ತೆಗೆದುಕೊಳ್ಳುತ್ತೇವೆ. ತನಿಖೆಯ ನಂತರ ಸತ್ಯ ತಿಳಿಯಲಿದೆ ಅಂತ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಹಾಗೂ ಸಾರಿಗೆ ಸಚಿವ ಬಿ.ಶ್ರೀರಾಮುಲು ಸಿದ್ದರಾಮಯ್ಯ ಅವರು ಹೇಳಿದರು, ಸುಳ್ಳು ಹೇಳಿ ರಾಜಕೀಯ ಮಾಡಿಕೊಂಡು ಬಂದಿಲ್ಲ. ನಾನು ಸುಳ್ಳು ಹೇಳಿ ರಾಜಕೀಯ ಮಾಡಿದ್ರೆ ದೊಡ್ಡ ವ್ಯಕ್ತಿಯಾಗುತ್ತಿದೆ ಅಂತ ಹೇಳಿದರು. ತನಿಖಾ ಸಮಿತಿ ವರದಿ ನೀಡಿದ ಬಳಿಕ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಲಾಗುವುದು. ಒಂದು ವೇಳೆ ವಿಮ್ಸ್ ಆಡಳಿತದಿಂದ ತಪ್ಪಾಗಿದ್ದರೆ ಅವರ ಮೇಲೆ ಎಫ್ಐಆರ್ ದಾಖಲು ಮಾಡಲಾಗುವುದು” ಎಂದರು.