ಚಾಮರಾಜನಗರ: ಜಿಲ್ಲೆ ಗುಂಡ್ಲುಪೇಟೆಯಲ್ಲಿ ಸಮಸ್ಯೆ ಹೇಳೋಕ್ಕೆ ಬಂದಿದ್ದ ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೊಡೆತ ತಿಂದ ಕೆಂಪಮ್ಮ ಉಲ್ಟಾ ಹೊಡೆದಿದ್ದಾರೆ.
ಸಚಿವರು ನನಗೆ ಹೊಡೆದಿಲ್ಲ. ನನಗೂ ಸೈಟ್ ಕೊಡಿ ಎಂದು ಕಾಲಿಗೆ ಬಿದ್ದೆ . ಆಗಾ ನನ್ನನ್ನು ಎತ್ತಿ ಕ್ಷಮೆ ಕೇಳಿ ಸಚಿವರು ಸಮಾಧಾನಪಡಿಸಿದರು. ಸಚಿವ ಸೋಮಣ್ಣ ಹೊಡೆದ್ರೂ ಹೊಡೆದಿಲ್ಲ ಅಂತಾ ಕೆಂಪಮ್ಮ ಉಲ್ಟಾ ಹೊಡೆದಿದ್ದಾರೆ.
ಇನ್ನು ಸಮಸ್ಯೆ ಹೇಳು ಮುಂದಾಗಿದ್ದ ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಿನ್ನೆ ನಡೆದಿದೆ.
ಗ್ರಾಮದಲ್ಲಿ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಮಧ್ಯಾಹ್ನ 3.30ಕ್ಕೆ ನಿಗದಿ ಮಾಡಲಾಗಿತ್ತು. ಆದರೆ ಸಂಜೆ 6:30 ಕ್ಕೆ ಸಚಿವರು ಆಗಮಿಸಿದ್ದಾರೆ. ಹೀಗಾಗಿ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಗಿದೆ. ಹೀಗಾಗಿ ಇದರಿಂದ ಬೇಸತ್ತ ಮಹಿಳೆ ತನ್ನ ಸಮಸ್ಯೆ ಹೇಳಿಕೊಳ್ಳಲು ರ್ವರು ಸಚಿವರ ಬಳಿ ತೆರಳಿದ್ದಾರೆ. ಈ ವೇಳೆ ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಾರೆ. ಘಟನೆ ನಂತರ ಪರಿಸ್ಥಿತಿಯನ್ನ ಪೊಲೀಸರು ತಿಳಿಗೊಳಿಸಿದರು.