ಹಾಸನ: ಜಿಲ್ಲೆಯಲ್ಲಿ ನಡೆದಿದ್ದ ಯುವತಿ ಅಪಘಾತದಿಂದ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‌ ಟ್ವಿಸ್ಟ್ ಸಿಕ್ಕಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಪ್ರೇಮಿಯೊಬ್ಬ ಕಾರಿನಿಂದ ಯುವತಿಗೆ ಡಿಕ್ಕಿ ಹೊಡೆದು ಕೊಲೆ ಮಾಡಿರುವುದು ಪೊಲೀಸ್ ತನಿಖೆ ವೇಳೆ ಬಹಿರಂಗವಾಗಿದೆ.

Breaking news:‌ ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ: 9 ಬಿಜೆಪಿ ಕಾರ್ಯಕರ್ತರ ಬಂಧನ

 

ಆಗಸ್ಟ್ 3 ರಂದು ಹಾಸನ ಹೊರವಲಯದ ಬೂವನಹಳ್ಳಿ ಕ್ರಾಸ್ ಬಳಿ ಸರಣಿ ಅಪಘಾತ ನಡೆದಿತ್ತು. ಆಲ್ಟೋ ಕಾರೊಂದು ಕೆಲಸಕ್ಕೆ ನಡೆದುಕೊಂಡು ಹೋಗುತ್ತಿದ್ದ ಯುವತಿ ಶರಣ್ಯಳಿಗೆ ಡಿಕ್ಕಿ ಹೊಡೆದು ಬಳಿಕ ಹಾಲಿನ ಗೂಡ್ಸ್ ಆಟೋ, 2 ಬೈಕ್ ಹಾಗೂ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದು ಚಾಲಕ ಪರಾರಿಯಾಗಿದ್ದ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶರಣ್ಯ ಆಗಸ್ಟ್ 4 ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಳು.

Breaking news:‌ ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ: 9 ಬಿಜೆಪಿ ಕಾರ್ಯಕರ್ತರ ಬಂಧನ

 

ಹೀಗಾಗಿ ಈ ಬಗ್ಗೆ ಅವರ ಅಣ್ಣ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ್ವಯ ಪೊಲೀಸರು ತನಿಖೆ ಕೈಗೊಂಡು ಆರೋಪಿ ಭರತ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಸತ್ಯಾಂಶಗಳೆಲ್ಲ ಬಯಲಿಗೆ ಬಂದಿದೆ.

Share.
Exit mobile version