ಬೆಂಗಳೂರು : ಬೆಂಗಳೂರಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವಾರು ಪ್ರದೇಶಗಳಲ್ಲಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ಇದೀಗ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ 16 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಒಂದು ಕುಸಿದು ಬಿದ್ದಿದ್ದು,ಕಟ್ಟಡದ ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗುತ್ತಿದೆ.
ಹೌದು ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 16 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಈ ಒಂದು ಘಟನೆ ನಡೆದಿದೆ. ಸ್ಥಳೀಯರು ಹೇಳುತ್ತಿರುವ ಪ್ರಕಾರ ಈ ಒಂದು ನಿರ್ಮಾಣ ಹಂತದ ಕಟ್ಟಡದ ಕೆಳಗಡೆ ಅನೇಕ ಕಾರ್ಮಿಕರು ವಾಸಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.
ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಕುಸಿದು ಬಿದ್ದಿರುವಂತ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಿ, ಅದರಡಿಯಲ್ಲಿ ಸಿಲುಕಿರುವಂತ ಕಾರ್ಮಿಕರನ್ನು ರಕ್ಷಣೆ ಮಾಡುವಂತ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.