ಬೆಂಗಳೂರು : ರಾಜ್ಯ ಸರ್ಕಾರವು ಯಜಮಾನಿಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೃಹ ಲಕ್ಷ್ಮಿ ಯೋಜನೆಯ 2 ತಿಂಗಳ ಬಾಕಿ ಹಣ 10 ದಿನಗಳ ಒಳಗಾಗಿ ಫಲಾನುಭವಿಗಳ ಖಾತೆಗೆ ಹಾಕಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಹಣ ಮೂರ್ನಾಲ್ಕು ತಿಂಗಳಿನಿಂದ ಬರುತ್ತಿಲ್ಲ ಎನ್ನುವುದು ತಪ್ಪು, ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಹಾಕಿದ್ದೇವೆ. ಜೂನ್, ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಹಾಕಲು ತಾಂತ್ರಿಕ ದೋಷವಾಗಿದ್ದು, ಈಗಾಗಲೇ ಡಿಬಿಟಿ ಪುಶ್ ಮಾಡುತ್ತಿದ್ದೇವೆ. 8-10 ದಿನದೊಳಗೆ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.
ಈ ಯೋಜನೆಯನ್ನು ಮಹಿಳೆಯ ಆರ್ಥಿಕ ಸಬಲೀಕರಣಕ್ಕಾಗಿ ಕೊಡಲಾಗುತ್ತಿದೆ. ಚುನಾವಣೆ ಪೂರ್ಣದಲ್ಲೇ ರಾಜ್ಯದ ಮಹಿಳೆಯರಿಗೆ ಈ ಭರವಸೆ ನೀಡಲಾಗಿತ್ತು. ಹಾಗಾಗಿ ಯಾವುದೇ ಕಾರಣಕ್ಕೂ ಗೃಹ ಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ತಿಳಿಸಿದ್ದಾರೆ.