ಜೈಪುರ : ರಾಜಸ್ಥಾನದ ಜೈಪುರ ಸಮೀಪದ ಬಸ್ಸಿ ಪೊಲೀಸ್ ಠಾಣೆ ವ್ಯಾಪ್ತಿಯ ಬೈನಡಾದಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಬೈಲರ್ ಸ್ಪೋಟಗೊಂಡು ಆರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ನಡೆದಿದೆ.
ಇತರ ಇಬ್ಬರು ಗಂಭೀರವಾಗಿ ಸುಟ್ಟುಹೋಗಿದ್ದಾರೆ. ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದ್ದರಿಂದ ಈ ಅಪಘಾತ ಸಂಭವಿಸಿದೆ.
ಬಸ್ಸಿ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಶಾಲಿಮಾರ್ ಕಾರ್ಖಾನೆಯಲ್ಲಿ ಶನಿವಾರ ಸಂಜೆ 6: 30 ರ ಸುಮಾರಿಗೆ ಬಾಯ್ಲರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಮುಖೇಶ್ ಚೌಧರಿ ತಿಳಿಸಿದ್ದಾರೆ. ಅಪಘಾತದಲ್ಲಿ ಆರು ಕಾರ್ಮಿಕರು ಸಜೀವ ದಹನವಾಗಿದ್ದರೆ, ಇತರ ಮೂವರು ಗಂಭೀರವಾಗಿ ಸುಟ್ಟುಹೋಗಿದ್ದಾರೆ. ಗಾಯಾಳುಗಳನ್ನು ಸವಾಯಿ ಮಾನ್ಸಿಂಗ್ ಆಸ್ಪತ್ರೆಯ ಸುಟ್ಟಗಾಯಗಳ ಘಟಕಕ್ಕೆ ದಾಖಲಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ, ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದವು. ಬೆಂಕಿ ನಂದಿಸಲು ಒಂಬತ್ತು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ.
ಘಟನೆಯ ಸಮಯದಲ್ಲಿ ಕಾರ್ಖಾನೆಯಲ್ಲಿ ಸುಮಾರು 40 ಜನರು ಇದ್ದರು. ಮೃತರನ್ನು ಮನೋಹರ್, ಹೀರಾಲಾಲ್, ಕೃಷ್ಣಲಾಲ್ ಗುರ್ಜರ್ ಮತ್ತು ಗೋಕುಲ್ ಹರಿಜನ್ ಎಂದು ಗುರುತಿಸಲಾಗಿದೆ. ಸುದ್ದಿ ಬರೆಯುವವರೆಗೂ, ಇಬ್ಬರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿದ್ದವು.