ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಇಂದು ಘೋರವಾದ ದುರಂತ ಸಂಭವಿಸಿದ್ದು, ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವದಂತಿ ಹಬ್ಬಿಸಿದ ಹಿನ್ನೆಲೆಯಲ್ಲಿ ಆತಂಕದಲ್ಲಿ ಪ್ರಯಾಣಿಕರು ರೈಲಿನ ಪಕ್ಕದ ಹಳಿಗೆ ಜಿಗಿದಿದ್ದಾರೆ.ಈ ವೇಳೆ ಮತ್ತೊಂದು ಹಳಿಯ ಮೇಲೆ ಬಂದ ಕರ್ನಾಟಕ ಎಕ್ಸ್ಪ್ರೆಸ್ ರೈಲು ಹರಿದು 20 ಜನರು ಸಾವನಪ್ಪಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ರೈಲ್ವೆ ಅಧಿಕಾರಿಯ ಮಾಹಿತಿ ಪ್ರಕಾರ 8 ಪ್ರಯಾಣಿಕರು ಸಾವನ್ನಪ್ಪಿದು 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಹೌದು ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿರುವ ವಿಷಯ ತಿಳಿದು, ಪ್ರಯಾಣಿಕರು ಇಳಿಯುವ ಭರದಲ್ಲಿ ಇನ್ನೊಂದು ಹಳಿಯ ಮೇಲೆ ನಿಂತಿದ್ದಾರೆ. ಈ ವೇಳೆ ದೆಹಲಿಯಿಂದ ಆಗಮಿಸುತ್ತಿದ್ದ ಕರ್ನಾಟಕ ಎಕ್ಸ್ಪ್ರೆಸ್ ರೈಲು ನಿಂತಿದ್ದ ಪ್ರಯಾಣಿಕರ ಮೇಲೆ ಹರಿದಿದೆ. ಈ ವೇಳೆ ಸುಮಾರು 8 ಜನ ಪ್ರಯಾಣಿಕರು ಸಾವನ್ನಪ್ಪಿದ್ದು 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಜಲಗಾಂವ್ ನ ಪರಾಂಡ ನಿಲ್ದಾಣದಲ್ಲಿ ಈ ಒಂದು ಘೋರ ದುರಂತ ಸಂಭವಿಸಿದೆ.
ಘಟನೆಯ ಕುರಿತಂತೆ ಮೊದಲು ಪ್ರಯಾಣಿಕರು ಚೈನ್ ಎಳೆದು ಹಳಿಗೆ ಜಿಗಿದಿದ್ದಾರೆ. ಈ ವೇಳೆ ಮತ್ತೊಂದು ಅಳಿಯಲಿ ಬರುತ್ತಿದ್ದ ರೈಲು ಪ್ರಯಾಣಿಕರಿಗೆ ಡಿಕ್ಕಿ ಹೊಡೆದಿದೆ. ಪ್ರಯಾಣಿಕರ ಮೇಲೆ ಕರ್ನಾಟಕ ಎಕ್ಸ್ಪ್ರೆಸ್ ರೈಲು ಹರಿದಿದೆ ಎಂದು ಸೆಂಟ್ರಲ್ ರೈಲ್ವೆ CPRO ಡಾ. ಸ್ವನಿಲ್ ಮಾಹಿತಿ ನೀಡಿದ್ದಾರೆ. ಆದರೆ ಚೈನ್ ಎಳೆಯಲು ಕಾರಣವೇನು ಎಂದು ಮಾಹಿತಿ ಸಿಕ್ಕಿಲ್ಲ ಎಂದು ಸ್ವಾನಿಲ್ ತಿಳಿಸಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.