ಮೈಸೂರು : ಹಿರಿಯ ಮಗಳು ಯುವಕನೊಬ್ಬನ ಪ್ರೀತಿಸಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದು ದಂಪತಿಗಳು ಹಾಗೂ ತಮ್ಮ ಇನ್ನೋರ್ವ ಪುತ್ರಿಯೊಂದಿಗೆ ಹಗ್ಗ ಕಟ್ಟಿಕೊಂಡು ಕೆರೆಯಲ್ಲಿ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಬೂದನಕೆರೆಯಲ್ಲಿ ಇಂದು ನಡೆದಿತ್ತು. ಇದೀಗ ಆತ್ಮಹತ್ಯೆ ಮಾಡಿಕೊಂಡ ಮೂವರ ಮೃತದೇಹಗಳು ಪತ್ತೆಯಾಗಿವೆ.
ಹೌದು ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಮೃತ ಮೂವರ ಮೃತದೇಹಗಳು ಬೂದನೂರು ಕೆರೆಯಲ್ಲಿ ಪತ್ತೆಯಾಗಿವೆ. ಮೈಸೂರು ಜಿಲ್ಲೆಯ ಹೆಚ್‍ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಮಹದೇವಸ್ವಾಮಿ ಪತ್ನಿ ಮಂಜುಳಾ ಮತ್ತು ಪುತ್ರಿ ಹರ್ಷಿತಾ ಮೃತದೇಹಗಳನ್ನು, ಇದೀಗ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.