ನವದೆಹಲಿ : ಬಿಹಾರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕಳ್ಳಭಟ್ಟಿ ಸೇವಿಸಿ ಸಾವನ್ನಪ್ಪಿದ್ದವರ ಸಂಖ್ಯೆ 20 ಕ್ಕೆ ಏರಿಕೆಯಾಗಿದೆ.
ಬಿಹಾರ ರಾಜ್ಯದ ಸಿವಾನ್ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದ್ದು, ಮೊದಲು 7 ಮಂದಿ ಮೃತಪಟ್ಟಿದ್ದರು. ಇದೀಗ ಮೃತರ ಸಂಖ್ಯೆ 20 ಕ್ಕೇರಿಕೆಯಾಗಿದೆ. ಮಂಗಳವಾರ ರಾತ್ರಿ ಅಂಗಡಿಯೊಂದರಲ್ಲಿ ಮಾರಾಟವಾಗಿದ್ದ ಅಕ್ರಮ ಮದ್ಯ ಸೇವಿಸಿದ ಹಲವರಿಗೆ ಹೊಟ್ಟೆನೋವು ವಾಕರಿಕೆ ಕಾಣಿಸಿಕೊಂಡಿತ್ತು. ಮಾಧಾರ್ ಗ್ರಾಮದ ಅಂಗಡಿಯಲ್ಲಿ ಕಳ್ಳಭಟ್ಟಿ ಮದ್ಯ ಸೇವಿಸಿ ಒಟ್ಟು 20 ಮಂದಿ ಮೃತಪಟ್ಟಿದ್ದಾರೆ.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಂಗಡಿ ಮಾಲೀಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.